ದಾವಣಗೆರೆ: ಸಾಮಾಜಿಕ ಕಾರ್ಯಕರ್ತ ಟಿ.ಅಜ್ಗರ್ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಮಾಡೆಲ್ ಸವಿತಾರನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಅಜ್ಗರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ, ನಟಿ, ಮಾಡೆಲ್ ಸವಿತಾ ಮಲ್ಲೇಶ್ ಅವರನ್ನು ಬಂಧಿಸಲಾಗಿದೆ.
ಸವಿತಾ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕೂಡ ಆಗಿದ್ದರು. ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಹಲವು ಉತ್ಪನ್ನಗಳ ಜಾಹೀರಾತಿನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಅಜ್ಗರ್ ಮೇಲೆ ಹಲ್ಲೆ, ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಶೀಟರ್ ಖಾಲಿದ್ ಪೈಲ್ವಾನ್ ಗೆ ಸಾಥ್ ನೀಡಿದ ಆರೋಪದಲ್ಲಿ ಸವಿತಾರನ್ನು ಬಂಧಿಸಲಾಗಿದೆ.
ದಾವಣಗೆರೆಯಲ್ಲಿ ನವೆಂಬರ್ 10ರಂದು ಅಜ್ಗರ್ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿತ್ತು.
