HomeEntertainment38ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ವೇತಾ ಶ್ರೀವಾತ್ಸವ್

38ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ವೇತಾ ಶ್ರೀವಾತ್ಸವ್

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಖ್ಯಾತಿಯ ನಟಿ ಶ್ವೇತಾ ಶ್ರೀವಾತ್ಸವ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದಾರೆ.

2006ರಲ್ಲಿ ತೆರೆಕಂಡ ‘ಮುಖಾಮುಖಿ’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ಇವರು 2007 ರಲ್ಲಿ ‘ಆ ದಿನಗಳು’ ದಲ್ಲಿ ತೆರೆ ಹಂಚಿಕೊಂಡರು. ಬಳಿಕ ‘ಸೈಬರ್ ಯುಗದೊಳ್ ನವ ಯುವ ಮಧುರ ಪ್ರೇಮ ಕಾವ್ಯಂ’ ಸಿನಿಮಾದಲ್ಲಿ ಮೊಟ್ಟ ಮೊದಲ ಬಾರಿಗೆ ನಾಯಕಿಯಾಗಿ ಕಾಣಿಸಿಕೊಂಡರು. ಇದಾದ ಬಳಿಕ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’  ‘ಆತ್ಮಸಾಕ್ಷಿ’ ‘ಫೇರ್ & ಲವ್ಲಿ‘ ಮತ್ತು ‘ಕಿರಗೂರಿನ ಗಯ್ಯಾಳಿಗಳು’ ಸೇರಿದಂತೆ  ಸಾಲು ಸಾಲು ಸಿನಿಮಾಗಳಲ್ಲಿ ತೆರೆ ಹಂಚಿಕೊಂಡರು.

ನಟಿ ಶ್ವೇತಾ ಶ್ರೀವಾತ್ಸವ್ ಕಳೆದ ವರ್ಷ ನವರಸ ನಾಯಕ ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’  ನಲ್ಲಿ ಅಭಿನಯಿಸಿದ್ದು, ಇತ್ತೀಚಿಗೆ ‘ಒಂದು ಸರಳ ಪ್ರೇಮಕಥೆ’ ಚಿತ್ರದಲ್ಲಿ ಅತಿಥಿ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ಚಿಕ್ಕಿಯ ಮುಕುಟ್ಟಿ’ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular