BIG NEWS : ‘ಮೈಸೂರು ಸ್ಯಾಂಡಲ್ ಸೋಪ್’ ರಾಯಭಾರಿಯಾಗಿ ನಟಿ ತಮನ್ನಾ ನೇಮಕ : ಭುಗಿಲೆದ್ದ ಕನ್ನಡಿಗರ ಆಕ್ರೋಶ.!

ಬೆಂಗಳೂರು : ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಕರ್ನಾಟಕದ ಉತ್ಪನ್ನಕ್ಕೆ ಕನ್ನಡದ ನಟಿಯರನ್ನೇ ರಾಯಭಾರಿಯನ್ನಾಗಿ ನೇಮಿಸಬೇಕು ಎಂದು ಕನ್ನಡಿಗರು ಪಟ್ಟು ಹಿಡಿದಿದ್ದಾರೆ.

ನಟಿ ತಮನ್ನಾಗೆ ಭಾರಿ ಮೊತ್ತದ ಸಂಭಾವನೆ ಕೊಟ್ಟು ಕರ್ನಾಟಕದ ಉತ್ಪನ್ನಗಳಿಗೆ ರಾಯಭಾರಿಯಾಗಿ ನೇಮಿಸಬೇಕಿತ್ತೇ..? ಕನ್ನಡದವರು ಸಾಕಷ್ಟು ಜನ ಇದ್ರಲ್ವ..? ಅವರಿಗೆ ಕೊಡಬಹುದಿತ್ತು ಎಂದು ಹಲವರು ಚಕಾರ ಎತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ನಡೆಗೆ ಭಾರಿ ಆಕ್ಷೇಪ ವ್ಯಕ್ತವಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರ ಆಕ್ರೋಶ

ಈ ಬಗ್ಗೆ ‘X’ ವೇದಿಕೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ನಾರಾಯಣ ಗೌಡರು “ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಚಿವ ಎಂ.ಬಿ ಪಾಟೀಲ್ ಟ್ವೀಟ್

ಈ ವಿವಾದದ ಬೆನ್ನಲ್ಲೇ ಸಚಿವ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದಾರೆ ‘’ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ
@siddaramaiahಅವರ ಮಾರ್ಗದರ್ಶನದಡಿ, ಕೆಎಸ್ಡಿಎಲ್ನ ಅಧ್ಯಕ್ಷರಾದ ಶ್ರೀ@CSNadagoudaINC
ಮತ್ತು ನಾನು, ಕರ್ನಾಟಕದ ಹೆಮ್ಮೆಯಾದ ಮೈಸೂರ್ ಸ್ಯಾಂಡಲ್ ಬ್ರಾಂಡ್ ಅನ್ನು ಭಾರತದ ಅಮೂಲ್ಯ ರತ್ನವಾಗಿಸಲು ಇಚ್ಚಾಶಕ್ತಿಯಿಂದ ಶ್ರಮಿಸುತ್ತಿದ್ದೇವೆ.

ಕೆ.ಎಸ್.ಡಿ.ಎಲ್. ವಹಿವಾಟನ್ನು 2028ರ ವೇಳೆಗೆ ರೂ.5,000 ಕೋಟಿಗೆ ಹೆಚ್ಚಿಸುವುದು ನಮ್ಮ ಹೆಗ್ಗುರಿ. ಈ ನಿಟ್ಟಿನಲ್ಲಿ ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಗೆ ಬೇಕಾಗಿರುವ ಬಹು ಆಯಾಮದ ಕಾರ್ಯತಂತ್ರಗಳನ್ನು ಅನುಸರಿಸಿ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ.

ಉತ್ಕೃಷ್ಟ ಫಲಿತಾಂಶಕ್ಕಾಗಿ ಉತ್ಕೃಷ್ಟತೆಯಲ್ಲಿ ಹೂಡಿಕೆ
ಶ್ರೇಷ್ಠತೆಯನ್ನು ಸಾಧಿಸುವ ಮೂಲಮಂತ್ರದಡಿ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳು, ಕುಶಲ ಮಾನವ ಸಂಪನ್ಮೂಲ, ರಚನಾತ್ಮಕ ಕಾರ್ಯಚಟುವಟಿಕೆಗಳು ಹೀಗೆ ಪ್ರತಿಯೊಂದು ಆಯಾಮದಲ್ಲಿಯೂ ನಾವು ಹೆಜ್ಜೆಯಿಡುತ್ತಿದ್ದೇವೆ.

ನಟಿ ತಮನ್ನಾ ಭಾಟಿಯಾ ಅವರನ್ನು ಬ್ರಾಂಡ್ ರಾಯಭಾರಿಯನ್ನಾಗಿ ನೇಮಿಸಿರುವುದರ ಹಿಂದೆ ಸಾಕಷ್ಟು ಅಂಶಗಳನ್ನು ಪರಿಗಣಿಸಿ, ಮಾನದಂಡಗಳನ್ನು ಅನುಸರಿಸಲಾಗಿದೆ. ಪ್ಯಾನ್ ಇಂಡಿಯಾ ಖ್ಯಾತಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯತೆ, ಯುವ ಸಮೂಹದ ಫಾಲೋವರ್ಸ್ ಒಳಗೊಂಡಂತೆ ನಾನಾ ಕೋನಗಳಲ್ಲಿ ಆಲೋಚಿಸಿ ನಿರ್ಧಾರ ಕೈಗೊಳ್ಳಲಾಗಿದೆ.

ನಮ್ಮ ಉತ್ಪನ್ನಗಳನ್ನು ವಿಶ್ವದೆಲ್ಲೆಡೆ ವಿಜೃಂಭಿಸುವಂತೆ ಮಾಡುವ ಕಾಯಕದಲ್ಲಿ ಇದು ಒಂದು ಭಾಗವಷ್ಟೆ. ಈ ಕಾರ್ಯವು ಕೇವಲ ಒಂದು ತಂತ್ರದ ಮೇಲೆ ಅವಲಂಬಿತವಾಗಿಲ್ಲ. ಅದಕ್ಕಾಗಿಯೇ ಕೆ.ಎಸ್.ಡಿ.ಎಲ್. ಸಂಸ್ಥೆಯಲ್ಲಿ ಸಂಪೂರ್ಣ ಹೊಸ ಆಯಾಮಗಳ ಕಾರ್ಯಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

  • ವಿಜಯಪುರದಲ್ಲಿ ನೂತನ ಉತ್ಪಾದನಾ ಘಟಕ
  • ಹಾಲಿ ಘಟಕಗಳಿಗೆ ಆಧುನಿಕ ಸ್ಪರ್ಶ ನೀಡಿ ಉತ್ಪಾದನೆಯನ್ನು ದ್ವಿಗುಣಗೊಳಿಸುವುದು
  • ಇ-ಕಾಮರ್ಸ್, ಕ್ವಿಕ್ ಕಾಮರ್ಸ್ ವೇದಿಕೆಗಳ ಮೂಲಕ ಮಾರಾಟ ಮಾಡುವ ವ್ಯವಸ್ಥೆ
  • ಇಆರ್ಪಿ ವ್ಯವಸ್ಥೆ ಅಳವಡಿಕೆ, ನಿಪುಣ ತಜ್ಞರ ನೇಮಕ
  • ಬಲಿಷ್ಠ ಹಂಚಿಕೆ ಸಂಪರ್ಕಜಾಲ ನಿರ್ಮಾಣದ ಜೊತೆಗೆ ಜಾಗತಿಕ ಮಟ್ಟದ ಮಾರ್ಕೆಟಿಂಗ್ ಏಜೆನ್ಸಿಗಳೊಂದಿಗೆ ಪಾಲುದಾರಿಕೆ

ಮೈಸೂರು ಸ್ಯಾಂಡಲ್ ಕೇವಲ ಒಂದು ಸೋಪ್ ಅಷ್ಟೇ ಅಲ್ಲ, ಇದು ಕರ್ನಾಟಕದ ಪರಂಪರೆಯ ಚಿಹ್ನೆ. ನಮ್ಮ ಸೂಕ್ತ ಕ್ರಮಗಳ ಮೂಲಕ ಈಗ ಇದು ಜಾಗತಿಕ ಮಟ್ಟದಲ್ಲಿ ರಾರಾಜಿಸಲಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read