HomeEntertainment31ನೇ ವಸಂತಕ್ಕೆ ಕಾಲಿಟ್ಟ ನಟಿ ವೈಭವಿ ಶಾಂಡಿಲ್ಯ

31ನೇ ವಸಂತಕ್ಕೆ ಕಾಲಿಟ್ಟ ನಟಿ ವೈಭವಿ ಶಾಂಡಿಲ್ಯ

ಕನ್ನಡ, ತೆಲುಗು, ತಮಿಳು ಮತ್ತು ಮರಾಠಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಟಿ ವೈಭವಿ ಶಾಂಡಿಲ್ಯ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.

2015ರಲ್ಲಿ ತೆರೆ ಕಂಡ ‘ಏಕ್ ಅಲ್ಬೇಲಾ’ ಎಂಬ ಮರಾಠಿ ಚಿತ್ರದ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು 2017 ರಂದು ತಮಿಳಿನ ‘ಸಕ್ಕ ಪೋಡು ಪೋಡು ರಾಜಾ’ ದಲ್ಲಿ ತೆರೆ ಹಂಚಿಕೊಂಡರು. ಬಳಿಕ ಶರಣ್ ಜೊತೆ ‘ರಾಜ್ ವಿಷ್ಣು’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಗಾಳಿಪಟ 2’ ದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ವೈಭವಿ ಶಾಂಡಿಲ್ಯ ಇತ್ತೀಚಿಗೆ ಧ್ರುವ ಸರ್ಜಾ ಜೊತೆ ‘ಮಾರ್ಟಿನ್’  ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಸದ್ಯ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಸಿನಿ ತಾರೆಯರು ವೈಭವಿ ಶಾಂಡಿಲ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular