HomeKarnatakaಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಗೌತಮ್ ಅದಾನಿ: ಕುತೂಹಲ ಮೂಡಿಸಿದ ಮಾತುಕತೆ

ಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಗೌತಮ್ ಅದಾನಿ: ಕುತೂಹಲ ಮೂಡಿಸಿದ ಮಾತುಕತೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಗೌತಮ್ ಅದಾನಿ ಭೇಟಿ ನೀಡಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸರ್ಕಾರ ಅಂದಾಜು 17,698 ಕೋಟಿ ವೆಚ್ಚ ನಿಗದಿಪಡಿಸಿತ್ತು. ಆದರೆ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಸಂಸ್ಥೆಯು 22,267 ಕೋಟಿ ರೂ. ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಸರ್ಕಾರದ ಅಂದಾಜು ಮೊತ್ತಕ್ಕಿಂತ ಇದು ಹೆಚ್ಚಾಗಿದ್ದರೂ, ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದ ಇತರೆ ಸಂಸ್ಥೆಗಳಿಗೆ ಹೋಲಿಸಿದರೆ ಅದಾನಿ ಸಂಸ್ಥೆಯ ಮೊತ್ತವೇ ಕಡಿಮೆಯಾಗಿದೆ.

ಟೆಂಡರ್ ಅಂತಿಮಗೊಳ್ಳುವ ಮುನ್ನವೇ ಸಂಸ್ಥೆಯು ಸುರಂಗ ಮಾರ್ಗ ಹಾದುಹೋಗುವ ಸ್ಥಳಗಳಲ್ಲಿ ಅಗತ್ಯವಿರುವ ಪ್ರಾಥಮಿಕ ಭೂ ಸಮೀಕ್ಷೆ ಹಾಗೂ ಮಣ್ಣಿನ ಗುಣಮಟ್ಟ ಪರೀಕ್ಷೆ ಸೇರಿದಂತೆ ಪ್ರಮುಖ ತಾಂತ್ರಿಕ ಪರೀಕ್ಷೆಗಳನ್ನು ಈಗಾಗಲೇ ಪೂರ್ಣಗೊಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular