HomeKarnatakaಆದರ್ಶ ವಿದ್ಯಾಲಯ : 6ನೇ ತರಗತಿ ದಾಖಲಾತಿಗೆ 3 ದಿನ ಅವಕಾಶ

ಆದರ್ಶ ವಿದ್ಯಾಲಯ : 6ನೇ ತರಗತಿ ದಾಖಲಾತಿಗೆ 3 ದಿನ ಅವಕಾಶ

ನಗರದ ಸರಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ ಅರ್ಹ ವಿದ್ಯಾರ್ಥಿಗಳ ಪ್ರವರ್ಗವಾರು ಕಟ್ ಆಫ್ ಅಂಕಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮಕ್ಕಳ ಪೋಷಕರಿಗೆ ಪ್ರವೇಶಾತಿ ಮಾಡಿಕೊಳ್ಳಲು ಕೇವಲ 3 ದಿನಗಳ ಕಾಲ ಮಾತ್ರ ಅವಕಾಶ ನೀಡಲಾಗಿದೆ. ಹಾಗಾಗಿ, ಪೋಷಕರು ಯಾವುದೇ ವಿಳಂಬ ಮಾಡದೆ ತಕ್ಷಣವೇ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿ ಪ್ರವೇಶಾತಿ ಅರ್ಜಿಯನ್ನು ಪಡೆದುಕೊಳ್ಳಬೇಕು.

*ಅಗತ್ಯ ದಾಖಲೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳು ಪ್ರಸ್ತುತ ಓದುತ್ತಿರುವ ಶಾಲೆಯಿಂದ ವರ್ಗಾವಣೆ ಪತ್ರ ಮತ್ತು ಅಂಕಪಟ್ಟಿ ಹಾಗೂ ಇತರ ಅಗತ್ಯ ಮೂಲ ದಾಖಲೆಗಳನ್ನು ತಂದು ನಿಗದಿತ ಅವಧಿಯೊಳಗೆ ಪ್ರವೇಶಾತಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕ ಸತ್ಯನಾರಾಯಣ ಎ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಪಿಯುಸಿ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು ಸ್ಟೇಟ್ ಹಾಸ್ಟೆಲ್ ಪೋರ್ಟಲ್ ವೆಬ್‌ಸೈಟ್ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಆ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಬಳ್ಳಾರಿ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕಾಗುತ್ತದೆ.

*ಕಚೇರಿ ವಿಳಾಸ:* ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಾಲ್ಮೀಕಿ ಭವನ, ನಲ್ಲಚೇರವು ಪ್ರದೇಶ, ಸ್ಟೇಡಿಯಂ ಹತ್ತಿರ, ಬಳ್ಳಾರಿ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ಮೊ.9110224569 ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಬಳ್ಳಾರಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular