HomeLatest Newsಆದರ್ಶ ವಿದ್ಯಾಲಯ : 7,8,9 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆದರ್ಶ ವಿದ್ಯಾಲಯ : 7,8,9 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ 2026-27ನೇ ಸಾಲಿಗೆ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಅದರ್ಶ ವಿದ್ಯಾಲಯದಲ್ಲಿ ಖಾಲಿ ಉಳಿದಿರುವ 7,8,9ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ನೇರವಾಗಿ ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಜೂನ್ 10 ರಿಂದ 17 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರವೇಶ ಪರೀಕ್ಷೆಯನ್ನು ಜೂನ್ 22ರಂದು ಬೆಳಿಗ್ಗೆ 10. 30 ರಿಂದ 1 ಗಂಟೆಯವರೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಈ ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆದರ್ಶ ವಿದ್ಯಾಲಯ ಶಾಲೆಯ ಮುಖ್ಯ ಶಿಕ್ಷಕರಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಸಹ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಿದಲ್ಲಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ ಆಡಳಿತ, ಅಭಿವೃದ್ಧಿ, ಬಿ.ಇ.ಓ, ಬಿ.ಆರ್.ಸಿ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕು ಆದರ್ಶ ವಿದ್ಯಾಲಯ ಮುಖ್ಯ ಶಿಕ್ಷಕರು ಇವರನ್ನು ಸಂಪರ್ಕಿಸಬಹುದು ಎಂದು ಡಯಟ್ ಪ್ರಾಚಾರ್ಯ ನಾಸಿರುದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನ್ನಭಾಗ್ಯ: ಜೂನ್-2026 ಮಾಹೆಯ ಪಡಿತರ ಬಿಡುಗಡೆ

ಚಿತ್ರದುರ್ಗ : ಅನ್ನಭಾಗ್ಯ ಯೋಜನೆಯಡಿ ಮೇ ಮತ್ತು ಜೂನ್-2026ರ ಎರಡು ಮಾಹೆಗಳ ಆಹಾರಧಾನ್ಯವನ್ನು ಜೂನ್-2026ರ ಮಾಹೆಯಲ್ಲಿ ವಿತರಿಸಲು ಸರ್ಕಾರ ನಿರ್ದೇಶನ ನೀಡಿದೆ. ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯವನ್ನು ಬಯೋಮೆಟ್ರಿಕ್ (ಬೆರಳುಚ್ಚು) ನೀಡಿ ಪಡೆದುಕೊಳ್ಳಬಹುದು.

ಮೇ-2026 ಮತ್ತು ಜೂನ್-2026ರ ಎರಡು ಮಾಹೆಗಳ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ 04 ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ, 05 ಸದಸ್ಯರಿಗೆ 30 ಕೆ.ಜಿ, 06 ಸದಸ್ಯರಿಗೆ 50 ಕೆ.ಜಿ, 07 ಸದಸ್ಯರಿಗೆ 70 ಕೆ.ಜಿ., 08 ಸದಸ್ಯರಿಗೆ 90 ಕೆ.ಜಿ , 09 ಸದಸ್ಯರಿಗೆ 110 ಕೆ.ಜಿ, 10 ಸದಸ್ಯರಿಗೆ 130 ಕೆ.ಜಿ ಅಕ್ಕಿ ಉಚಿತ ಪಡೆದುಕೊಳ್ಳಬೇಕು. 10 ಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿಗೆ ಇದೇ ಅನುಪಾತದಂತೆ ಅಕ್ಕಿಯನ್ನು ವಿತರಣೆ ಮಾಡಲಾಗುತ್ತದೆ.

01 ರಿಂದ 03 ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ.ಯಂತೆ ಈಗಾಗಲೇ ಎನ್.ಎಫ್.ಎಸ್.ಎ ಯೋಜನೆಯಡಿ ಮೇ-2026ರಲ್ಲಿ 35 ಕೆ.ಜಿ ಮತ್ತು ಜೂನ್-2026ರಲ್ಲಿ 35 ಕೆ.ಜಿ ಸೇರಿ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ರಾಗಿ ಆಹಾರಧಾನ್ಯಗಳನ್ನು ಮೇ-2026ರ ಮಾಹೆಯಲ್ಲೇ ವಿತರಣೆ ಮಾಡಲಾಗಿರುತ್ತದೆ. ಆದ್ದರಿಂದ ಇವರಿಗೆ ಜೂನ್-2026ರ ಮಾಹೆಯಲ್ಲಿ ಹಂಚಿಕೆ ಇರುವುದಿಲ್ಲ.

ಕೇಂದ್ರ ಮತ್ತು ರಾಜ್ಯ ಆದ್ಯತಾ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ದೊರೆಯಲಿದೆ. ಯಾವುದೇ ನ್ಯಾಯಬೆಲೆ ಅಂಗಡಿ ಕಾರ್ಯದರ್ಶಿ ಅಥವಾ ಮಾಲೀಕರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದಲ್ಲಿ ಅಥವಾ ಹಣ ಕೇಳಿದಲ್ಲಿ ರಾಜ್ಯ ಸಹಾಯವಾಣಿ ಸಂಖ್ಯೆ 1967 ಹಾಗೂ ಜಂಟಿ ನಿರ್ದೇಶಕರ ಕಚೇರಿ ಅಥವಾ ತಹಶೀಲ್ದಾರ್ ಕಚೇರಿಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ಆಹಾರ ಜಂಟಿ ನಿರ್ದೇಶಕ ಸಿದ್ರಾಮ ಮಾರಿಹಾಳ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular