HomeKarnatakaಪೋಷಕರೇ ಗಮನಿಸಿ : ʻಆದರ್ಶ ವಿದ್ಯಾಲಯʼ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಪೋಷಕರೇ ಗಮನಿಸಿ : ʻಆದರ್ಶ ವಿದ್ಯಾಲಯʼ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು : ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯಲ್ಲಿ 2024-25 ನೇ ಸಾಲಿಗೆ 6ನೇ ತರಗತಿ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪಾಲಕರು ಹಾಗೂ ತಾಲ್ಲೂಕಿನ ಎಲ್ಲ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಾಯರು ಇಲಾಖೆಯ ವೆಬ್‌ಸೈಟ್:  www.schooleducation.kar.nic.in     ಮತ್ತು   vidyavahini.karnataka.gov.in     ಮೂಲಕ ಫೆಬ್ರವರಿ 06 ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಬೇಕು.

ಅಗತ್ಯ ದಾಖಲೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಪ್ರಸ್ತುತ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯ ಸ್ಯಾಟ್ಸ್ ನಂಬರ್, ಇತ್ತೀಚಿನ ಭಾವ ಚಿತ್ರ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪೋಷಕರ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಗಳನ್ನು ಒದಗಿಸಬೇಕು. ಬೇರೆ ತಾಲ್ಲೂಕು/ಜಿಲ್ಲೆ/ರಾಜ್ಯಗಳ ಮಕ್ಕಳು ಕಡ್ಡಾಯವಾಗಿ  ವ್ಯಾಸಂಗ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಬೇಕು.(ಪಾಲಕರು ಕೊಪ್ಪಳ ತಾಲ್ಲೂಕಿನಲ್ಲಿ ವಾಸವಿರಬೇಕು.) ಆಯ್ಕೆಯಾದ ಪಕ್ಷದಲ್ಲಿ ಸಕ್ಷಮ ಪ್ರಾಧಿಕಾರದಿಂದ ದಾಖಲಾತಿ ಪಡೆಯುವ ಸಂದರ್ಭದಲ್ಲಿ ವಾಸಸ್ಥಳ ಪ್ರಮಾಣ ಪತ್ರ ಹಾಜರುಪಡಿಸಬೇಕು. ಅಂಗವಿಕಲ ವಿದ್ಯಾರ್ಥಿಗಳಿಗೆ ಸಕ್ಷಮ ಪ್ರಾಧಿಕಾರದಿಂದ ನೀಡಿರುವ ಪ್ರಮಾಣ ಪತ್ರ ಸಲ್ಲಿಸಬೇಕು.

For Latest News Updates, Join Our Whatsapp Community🚩
RELATED ARTICLES

Most Popular