ಬಳ್ಳಾರಿ : ಇಲ್ಲಿನ ಹಿರಿಯಾಳ್ ಕುಡಂ ಈದ್ಗಾ ರಸ್ತೆಯ ಕುರುಗೋಡು ತಾಲೂಕು ಪಶ್ಚಿಮ ವಲಯ ವ್ಯಾಪ್ತಿಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನ 6ನೇ ತರಗತಿಯ ಉಳಿಕೆ ಸೀಟುಗಳ ಭರ್ತಿಗಾಗಿ ಜುಲೈ 21 ರಂದು ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ.
ಶಾಲೆಯಲ್ಲಿ ಖಾಲಿ ಇರುವ ಒಟ್ಟು 5 ಸೀಟುಗಳಿಗೆ ಅರ್ಹ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಯ ಎಲ್ಲಾ ಅಗತ್ಯ ಮೂಲ ದಾಖಲೆಗಳನ್ನು ಒದಗಿಸಬೇಕು. ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪ್ರವೇಶ ಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಂದು ವೇಳೆ ವಿದ್ಯಾರ್ಥಿಯು ಬೇರೆ ತಾಲೂಕಿನಿಂದ ಬಂದವರಾಗಿದ್ದಲ್ಲಿ, ತಹಶೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಮತ್ತು ಪೋಷಕರು ಶಾಲೆಯ ಕಚೇರಿಯನ್ನು ಅಥವಾ ಮೊ.9740738762 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಟಿಟಿಸಿ: ತರಬೇತಿಗಾಗಿ ಅರ್ಜಿ ಆಹ್ವಾನ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರದ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹತ್ತನೇ ತರಗತಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ತಲಾ 10 ಯುವಕರಿಗೆ ‘ಟೂಲರೂಮ್ ಮಶಿನಿಸ್ಟ್’ ತಾಂತ್ರಿಕ ವೃತ್ತಿ ತರಬೇತಿಗೆ ಉಚಿತ ಪ್ರವೇಶಾತಿ ಪ್ರಾರಂಭವಾಗಿದೆ.
ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಫಿಟ್ಟರ್, ಟರ್ನರ್, ಮಿಲ್ಲರ್, ಸಿಎನ್‌ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್‌ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.
ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ, ಮತ್ತು ಅಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋಮೆಂಟ್ ನನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್) ಅಥವಾ ದೂ.08392-200087, ಮೊ.9620057086, 6361880236, 7795680677 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ಮುತ್ತಣ್ಣ ದರ್ಮಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

