HomeKarnatakaಗ್ರಾಮೀಣ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ಅನುದಾನ ಘೋಷಣೆ

ಗ್ರಾಮೀಣ ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ಅನುದಾನ ಘೋಷಣೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ‌ ಜೊತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿ, ನೀಡಿದ ಪ್ರಮುಖ ಮಾರ್ಗದರ್ಶನಗಳು ಹಾಗೂ ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ:

 ₹1 ಕೋಟಿ ಹೆಚ್ಚುವರಿ ಅನುದಾನ: ಗ್ರಾಮೀಣ ತಾಲ್ಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿ ಅನುದಾನ ಘೋಷಣೆ.

ಬೋಗಸ್ ಬೋರ್‌ವೆಲ್‌ಗೆ ಬ್ರೇಕ್: ಹೊಸ ಬೋರ್‌ವೆಲ್‌ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು. ನಕಲಿ ಪ್ರಕರಣಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರಕ್ಕೆ ಶೀಘ್ರ ವರದಿ: ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಕೆ; ಕೇಂದ್ರ ತಂಡಕ್ಕೆ ವಾಸ್ತವಾಂಶ ಮನವರಿಕೆ ಮಾಡಲು ಸೂಚನೆ.

 ರೈತರ ಹಿತರಕ್ಷಣೆಗೆ ಆದ್ಯತೆ: ಸಣ್ಣ ಮತ್ತು ಅತಿ ಸಣ್ಣ ರೈತರ ಹಿತವೇ ಮುಖ್ಯ ಆದ್ಯತೆ. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.

ವಿದ್ಯುತ್ ವ್ಯವಸ್ಥೆ: ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ವಿಶೇಷ ಗಮನ ನೀಡಿ, ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು 4G ವಿನಾಯಿತಿ.

‘TEAM KARNATAKA’ ಮನಸ್ಥಿತಿ: ಅಧಿಕಾರಿಗಳು ಕೇವಲ ಕಾಗದದ ವರದಿ ನೀಡದೆ, ಫೀಲ್ಡ್‌ಗಿಳಿದು ಆಡಳಿತಾತ್ಮಕ ಟೀಮ್‌ ವರ್ಕ್ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು.

ರಾಜ್ಯದ ಮಳೆ ಹಾಗೂ ಜಲಮಟ್ಟದ ಪ್ರಸ್ತುತ ಅಂಕಿ-ಅಂಶಗಳು:

 ಮಳೆ ಕೊರತೆ: ಜುಲೈ 18ರವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ. 39ರಷ್ಟು ಕೊರತೆ. 170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವ (ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ -67% ಕೊರತೆ).

ಪ್ರಾದೇಶಿಕ ಕೊರತೆ: ಮಲೆನಾಡು (-43%), ಕರಾವಳಿ (-35%), ಉತ್ತರ ಒಳನಾಡು (-33%), ದಕ್ಷಿಣ ಒಳನಾಡು (-31%).

ಜಲಾಶಯಗಳ ಸ್ಥಿತಿ: ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ. 40 ರಷ್ಟು ಮಾತ್ರ ನೀರು ಸಂಗ್ರಹವಿದೆ (ಪ್ರಸ್ತುತ 359.98 ಟಿಎಂಸಿ, ಕಳೆದ ವರ್ಷ 681.83 ಟಿಎಂಸಿ ಇತ್ತು).

ಜಲವಿದ್ಯುತ್ ಜಲಾಶಯಗಳು: ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಕೇವಲ ಸರಾಸರಿ ಶೇ. 23 ರಷ್ಟು ಮಾತ್ರ ನೀರು ಸಂಗ್ರಹವಿದೆ. ಕಾವೇರಿ ಕಣಿವೆಯಲ್ಲಿ ಶೇ. 51 ಹಾಗೂ ಕೃಷ್ಣಾ ಕಣಿವೆಯಲ್ಲಿ ಶೇ. 48 ರಷ್ಟು ನೀರಿದೆ.

ರೈತರ ಹಿತರಕ್ಷಣೆಗೆ ಆದ್ಯತೆ: ರೈತರು ಕಡಿಮೆ‌ ನೀರಿನ‌ ಬಳಕೆಯಾಗುವ ಬೆಳೆಗಳನ್ನು ಬೆಳೆಯುವ ಮೂಲಕ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಜೋಡಿಸಬೇಕು. ರೈತರ ಹಿತರಕ್ಷಣೆಗೆ ಸಕಲ ಸಿದ್ಧತೆಗಳನ್ನೂ ಮಾಡಲಾಗುವುದು.‌

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular