BREAKING : ಜೂ.27 ರಂದು ‘ಕೆಂಪೇಗೌಡ ಜಯಂತಿ’ ಆಚರಿಸಲು ನಿರ್ಧಾರ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಜೂ.27 ರಂದು ಕೆಂಪೇಗೌಡ ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್: ಜೂ.27 ರಂದು ಕೆಂಪೇಗೌಡ ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಇದಕ್ಕಾಗಿ ಈಗಿನಿಂದಲೇ ಎಲ್ಲಾ ಸಿದ್ದತೆ ನಡೆಯಲಿದೆ ಎಂದು ಹೇಳಿದರು. ತೈಲಬೆಲೆ ಏರಿಕೆ ಬಗ್ಗೆ ಮಾತನಾಡಿದ ಡಿಸಿಎಂ ತೈಲಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆ, ಮಾಡಲಿ ಬಿಡಿ ಎಂದು ಹೇಳಿದರು. ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚಳವಾಗಿದೆ, ಎಲ್ಲದಕ್ಕೂ ಟ್ಯಾಕ್ಸ್ ಹಾಕುತ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಅಗತ್ಯ ಸೂಚನೆ ನೀಡಿದೆ ಎಂದು ಡಿಸಿಎಂ ಡಿಕೆಶಿ ಟ್ವೀಟ್ ಮಾಡಿದ್ದಾರೆ.

https://twitter.com/DKShivakumar/status/1802967481675399626

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read