HomeKarnatakaBREAKING : ಚನ್ನಗಿರಿ 'ಲಾಕಪ್ ಡೆತ್' ಕೇಸ್ : ಲೋ ಬಿಪಿಯಿಂದ ನನ್ನ ಮಗ ಸಾವನ್ನಪ್ಪಿದ್ದಾನೆ...

BREAKING : ಚನ್ನಗಿರಿ ‘ಲಾಕಪ್ ಡೆತ್’ ಕೇಸ್ : ಲೋ ಬಿಪಿಯಿಂದ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದ ‘ಅದೀಲ್’ ತಂದೆ

ದಾವಣಗೆರೆ :   ಇದು ‘ಲಾಕಪ್ ಡೆತ್’ ಅಲ್ಲ  , ಲೋ ಬಿಪಿಯಿಂದ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ಅದೀಲ್ ತಂದೆ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯ ಚನ್ನಗಿರಿಯಲ್ಲಿ ನಡೆದ ಲಾಕಪ್ ಡೆತ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೀಲ್ ತಂದೆ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ನನ್ನ ಮಗನ ದೇಹದ ಮೇಲೆ ಯಾವುದೇ ಗಾಯದ ಗುರುತಿಲ್ಲ. ಲೋ ಬಿಪಿಯಿಂದ ನನ್ನ ಮಗ ಸಾವನ್ನಪ್ಪಿದ್ದಾನೆ ಎಂದು ಅದೀಲ್ ತಂದೆ ಹೇಳಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಮೃತಪಟ್ಟಿದ್ದು, ಉದ್ರಿಕ್ತಗೊಂಡ ಸಂಬಂಧಿಕರು ಪೊಲೀಸ್ ಠಾಣೆ, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.  ಚನ್ನಗಿರಿಯ ಟಿಪ್ಪುನಗರ ನಿವಾಸಿ ಆದಿಲ್ ಎಂಬಾತ ಮಟ್ಕಾ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು. ನಿನ್ನೆ ಸಂಜೆ ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದ ಸಂದರ್ಭದಲ್ಲಿ ಲೋ ಬಿಪಿಯಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಪೊಲೀಸರೇ ಹಲ್ಲೆ ನಡೆಸಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿ ವಾಗ್ವಾದ ನಡೆಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ್ದು, ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ತಡರಾತ್ರಿ ಪೊಲೀಸ್ ವಾಹನದ ಮೇಲೆ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular