BIG NEWS : ‘ರಾಷ್ಟ್ರೀಯ ಲೋಕ್ ಅದಾಲತ್’ ಮಾರ್ಚ್ 16 ಕ್ಕೆ ಮುಂದೂಡಿಕೆ

ಬೆಂಗಳೂರು :  ಮಾರ್ಚ್, 09 ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ್ ಅದಾಲತ್ನ್ನು ಮಾರ್ಚ್ 16 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ.

ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗೆ ವೆಬ್ಸೈಟ್: www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಮತ್ತು 1800-425-90900 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read