HomeLatest Newsಶಿವಮೊಗ್ಗ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ : ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ : ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ : ನಂದಿಬೆಟ್ಟದಲ್ಲಿ ಜು.2 ರಂದು ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ರೂ. 307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರೆ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.

ಗುರುವಾರ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸೊರಬ ತಾಲ್ಲೂಕಿನ ದಂಡಾವತಿ ಡ್ಯಾಂ ಮಾರ್ಪಡಿತ ಯೋಜನೆ ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು ಯಾವುದೇ ರೈತರ ಜಮೀನು ಹಾಗೂ ಮನೆಗಳನ್ನು ಮುಳುಗಡೆಗೊಳಿಸದೇ ವಿನ್ಯಾಸಗೊಳಿಸಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೊರಬ ತಾಲ್ಲೂಕಿನ ಯಡಗೊಪ್ಪ ಗ್ರಾಮದ ಹತ್ತಿರ ದಂಡಾವತಿ ನದಿಗೆ ರೂ.38.50 ಕೋಟಿ ವೆಚ್ಚದಲ್ಲಿ ಬ್ಯಾರೇಜ್ ನಿರ್ಮಿಸಿ 15 ಕೆರೆಗಳನ್ನು ತುಂಬಿಸುವ ಯೋಜನೆ, ದಂಡಾವತಿ ಮತ್ತು ವರದಾ ನದಿಗಳಿಗೆ ಅಡ್ಡಲಾಗಿ ರೂ.54.70 ಕೋಟಿ ವೆಚ್ಚದಲ್ಲಿ ಬ್ಯಾರೇಜ್ /ಬ್ರಿಡ್ಜ್ ಕಂ ಬ್ಯಾರೇಜ್‌ಗಳನ್ನು ನಿರ್ಮಿಸುವ ಯೋಜನೆ, ಗುಡವಿ ಗ್ರಾಮದ ಹತ್ತಿರ ವರದಾ ನದಿಗೆ ಅಡ್ಡಲಾಗಿ ರೂ.75.60 ಕೋಟಿ ವೆಚ್ದದಲ್ಲಿ ಬ್ಯಾರೇಜ್ ನಿರ್ಮಿಸಿ 0.1017 ಟಿಎಂಸಿ ನೀರನ್ನೆತ್ತಿ 32 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುಮೋದನೆ ದೊರೆತಿದೆ.

ಭದ್ರಾವತಿ ತಾಲ್ಲೂಕಿನ ಗೋಣಿಬೀಡು ಗ್ರಾಮದ ಹತ್ತಿರ ರೂ.54 ಕೋಟಿ ಅಂದಾಜು ವೆಚ್ಚದಲ್ಲಿ ಭದ್ರಾನದಿಯಿಂದ 0.19 ಟಿಎಂಸಿ ನೀರನ್ನು ಕಂಬದಾಳ್ ಹೊಸೂರು ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಂಕರಘಟ್ಟ, ಹುಣಸೆಕಟ್ಟೆ, ಗೋಣಿಬೀಡು, ತಮ್ಮಡಿಹಳ್ಳಿ, ರಾಮಿನಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮಗಳ 2 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಭದ್ರಾವತಿ ಪಟ್ಟಣದ ಭದ್ರಾನದಿ ಎಡ ಮತ್ತು ಬಲದಂಡೆಯ ಪ್ರಹಾಹಪೀಡಿತ ಪ್ರದೇಶಗಳನ್ನು ರಕ್ಷಿಸಲು ರೂ.50 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ರೂ.35 ಕೋಟಿ ವೆಚ್ಚದಲ್ಲಿ ಭದ್ರಾ ನದಿಗೆ ಅಡ್ಡಲಾಗಿ ರಸ್ತೆ ಸೇತುವೆ ನಿರ್ಮಾಣ ಮತ್ತು ಡೊಣಬಘಟ್ಟ, ಕಾಗೆಕೊಡುಮಗ್ಗೆ, ಹೊಳೆಹೊನ್ನೂರು ಗ್ರಾಮದ ಭದ್ರಾವತಿ ಮುಖ್ಯ ರಸ್ತೆ ನಡುವೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುಮೋದನೆ ದೊರೆತಿದ್ದು ಇನ್ನು ಒಂದೂವರೆ ವರ್ಷದೊಳಗೆ ಈ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

ಹಾಗೂ ಸೊರಬ ತಾಲ್ಲೂಕಿನಲ್ಲಿ ರೂ.561 ಕೋಟಿ ಮೊತ್ತದಲ್ಲಿ ಕುಡಿಯುವ ನೀರು ಯೋಜನೆಗಳಿಗೆ ಅಂದಾಜು ಪಟ್ಟಿ ಸಿದ್ದಪಡಿಸಿದ್ದು ಮುಂದಿನ ದಿನಗಳಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.
ಚAದ್ರಗುತ್ತಿ ಪ್ರಾಧಿಕಾರ ರಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ದೇವಸ್ಥಾನದ ಅಭಿವೃದ್ದಿಗಾಗಿ 20 ಎಕರೆ ಜಮೀನು ಹಸ್ತಾಂತರಗೊAಡಿರುತ್ತದೆ. ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಜಿಲ್ಲಾ ಕ್ರೀಡಾ ಅಭಿವೃದ್ದಿಗೆ ವಿವಿಧ ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಪ್ರತಿನಿಧಿಗಳೊಂದಿಗೆ ಜೂ.27 ರಂದು ಸಭೆ ನಡೆಸಿ ಸೂಕ್ತ ಸಲಹೆಸೂಚನೆಗಳನ್ನು ನೀಡಿದ್ದೇನೆ. ನೆಹರು ಕ್ರೀಡಾಂಗಣದ ಸಮಗ್ರ ಅಭಿವೃದ್ದಿಗೆ ರೂ.16.25 ಕೋಟಿ ಸೇರಿದಂತೆ ಒಟ್ಟಾರೆ ಜಿಲ್ಲೆಯ ಸಮಗ್ರ ಕ್ರೀಡಾಭಿವೃದ್ದಿಗೆ 32.25 ಕೋಟಿಗಳ ಪ್ರಸ್ತಾವನೆಯನ್ನು ಪಡೆಯಲಾಗಿದೆ ಎಂದರು.

ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ನಿರಂತರವಾಗಿ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದ್ದು, ಇದೀಗ ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ, ಸುಮಾರು 1800 ಕ್ಕೂ ಹೆಚ್ಚು ದಾಖಲಾತಿಗಳನ್ನು ಸಲ್ಲಿಸಲಾಗಿದೆ. ಹಂತ ಹಂತವಾಗಿ ಸಂತ್ರಸ್ತರಿಗೆ ಸಂಪೂರ್ಣ ನ್ಯಾಯ ಒದಗಿಸಲಾಗುವುದು.

ಪಿಯುಸಿ ಪರೀಕ್ಷೆ ಫಲಿತಾಂಶ ಉತ್ತಮ : ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಕ್ರೋಢೀಕೃತ ಫಲಿತಾಂಶ ಶೇ.79.81 ಹಾಗೂ ಹೊಸಬರ ಫಲಿತಾಂಶ ಶೇ.85.19 ಫಲಿತಾಂಶ ದೊರೆತಿದೆ. ಪಿಯುಸಿ ಮೂರನೇ ಪರೀಕ್ಷೆಗೆ ಒಟ್ಟು 1,11,002 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 22,446 ಅಂದರೆ ಶೇ.20.22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಹಾಜರಾತಿ ಮತ್ತು ಉತ್ತೀರ್ಣದ ಸಂಖ್ಯೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಏರಿಕೆಯಾಗಿದೆ. ಅಂಕ ಸುಧಾರಣೆಗೆ 17,398 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು 11,937 ವಿದ್ಯಾರ್ಥಿಗಳು ತಮ್ಮ ಅಂಕ ಹೆಚ್ಚಿಸಿಕೊಂಡಿದ್ದಾರೆ ಎಂದರು.

ಅಹವಾಲು ಸ್ವೀಕಾರ : ಸಚಿವರು, ಪತ್ರಿಕಾಗೋಷ್ಟಿಯ ನಂತರ ಸಾರ್ವಜನಿಕರಿಂದ ಸುಮಾರು 100 ಕ್ಕೂ ಹೆಚ್ಚು ಕುಂದು ಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್, ಮಾಜಿ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಆರ್ ಪ್ರಸನ್ನಕುಮಾರ್, ಇತರೆ ಮುಖಂಡರು ಹಾಜರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular