HomeLatest Newsಪಿಜಿ ಆಯುಷ್ ಕೋರ್ಸ್ ಗಳ ಪ್ರವೇಶ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಪಿಜಿ ಆಯುಷ್ ಕೋರ್ಸ್ ಗಳ ಪ್ರವೇಶ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸ್ನಾತಕೋತ್ತರ ಆಯುಷ್ ಕೋರ್ಸ್ ಗಳ ಪ್ರವೇಶ ಸಂಬಂಧ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಡಿ.4ರಿಂದ ಆರಂಭವಾಗಲಿದ್ದು ಈ ಸುತ್ತಿನಲ್ಲಿ ಹೊಸದಾಗಿ ಭಾಗವಹಿಸಲು ಇಚ್ಛಿಸುವವರು ಕೂಡ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಅರ್ಹತೆ ಪಡೆದು, ಪ್ರಾಧಿಕಾರದಲ್ಲಿ ನೋಂದಣಿ ಮಾಡದಿರುವ ಅಭ್ಯರ್ಥಿಗಳು ಡಿ.2ರಿಂದ 4ರವರೆಗೆ ನೋಂದಣಿ ಮಾಡಿಕೊಂಡು ಶುಲ್ಕ ಪಾವತಿಸಬೇಕು.

3ನೇ ಸುತ್ತಿಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಡಿ.4ರಿಂದ ಡಿ.6ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.6ರಂದು ಸಂಜೆ 7ಗಂಟೆಗೆ ತಾತ್ಕಾಲಿಕ ಫಲಿತಾಂಶ ಹಾಗೂ ಡಿ‌.8ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.

ಸೀಟು ಹಂಚಿಕೆಯಾದವರು ಡಿ‌.8ರಿಂದ 9ರವರೆಗೆ ಶುಲ್ಕ ಪಾವತಿ ಹಾಗೂ ಡಿ.10ರವರೆಗೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಂದೇ ಸಂಜೆಯೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular