ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಆರನೇ ತರಗತಿ ಪ್ರವೇಶಾತಿಗೆ ಡಿಸೆಂಬರ್ 13 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ನೋಂದಾಯಿಸಿಕೊಂ ಡ ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು ಎಂದು ವಿದ್ಯಾಲಯದ ಪ್ರಾಚಾರ್ಯ ಸುದೇಶ ಗೋಪಾಲ ಮಲಾಜುರೆ ಅವರು ತಿಳಿಸಿದ್ದಾರೆ.
ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಆನ್ ಲೈನ್ ವೆಬ್ ಸೈಟ್ https://cbseitms.rcil.gov.in/nvs/AdminCard/AdminCard ಗೆ ಭೇಟಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
