‘ಫೆಂಗಲ್’ ಚಂಡಮಾರುತ ಹಿನ್ನೆಲೆ ರೈತರಿಗೆ ಮುಖ್ಯ ಮಾಹಿತಿ: ಭತ್ತ ಕೊಯ್ಲು ಮುಂದೂಡಲು ಸೂಚನೆ

ಶಿವಮೊಗ್ಗ: ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು, ಮಲೆನಾಡು ಭಾಗದಲ್ಲಿ ಡಿಸೆಂಬರ್ ಮೊದಲ ವಾರ ಹಿಂಗಾರು ಮಳೆ ರೀತಿಯ ಮಳೆಯಾಗುವ ಸಾಧ್ಯತೆ ಇದೆ.

ರೈತರು ಭತ್ತದ ಕೊಯ್ಲನ್ನು ಒಂದು ವಾರ ಮುಂದೂಡುವಂತೆ ಸಲಹೆ ನೀಡಲಾಗಿದೆ. ಈಗಾಗಲೇ ಕೊಯ್ಲು ಮಾಡಿದ್ದಲ್ಲಿ ಉತ್ಪನ್ನವನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸುವಂತೆ ತೀರ್ಥಹಳ್ಳಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಷ್ಕ ಮತ್ತು ಶೀತ ಗಾಳಿ ಸೆಳೆಯಲ್ಪಡುತ್ತಿದೆ. ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಸೈಕ್ಲೋನ್ ಭೂ ಪ್ರವೇಶಿಸುತ್ತಿದ್ದಂತೆ ರಾಜ್ಯದಲ್ಲಿ ಚಳಿ ವಾತಾವರಣ ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಡಿಸೆಂಬರ್ 2 ಅಥವಾ 3ರಂದು ಚಂಡಮಾರುತ ಕೇರಳದ ಕಾಸರಗೋಡು ಮತ್ತು ಕಣ್ಣೂರು ಮಧ್ಯೆ ಆರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಇದು ಒಳನಾಡು ಸೇರಿ ಮಲೆನಾಡು ಭಾಗದಲ್ಲಿ ಮಳೆಗೆ ಕಾರಣವಾಗಲಿದೆ. ಡಿಸೆಂಬರ್ ಮೊದಲ ವಾರ ಪೂರ್ಣ ಮಳೆ ಸುರಿಯುವ ಸಾಧ್ಯತೆಯಿದ್ದು, ರೈತರು ಭತ್ತದ ಕೊಯ್ಲು ಮುಂದೂಡುವುದು ಸೂಕ್ತವೆಂದು ಕೃಷಿ ಇಲಾಖೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read