ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಡಿವೈಎಸ್ ಪಿ ಕನಕಲಕ್ಷ್ಮೀಯಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜೀವಾ ಆತ್ಮಹತ್ಯೆ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಡಿವೈಎಸ್ ಪಿ ಕನಕಲಕ್ಷ್ಮೀ ಅರವರನ್ನು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿದ್ದ ವೇಳೆ ನ್ಯಾಯಾಲಯ ಡಿವೈಎಸ್ ಪಿ ಕನಕಲಕ್ಷ್ಮೀ ಅವರಿಗೆ ಮಾರ್ಚ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ವಕೀಲೆ, ಉದ್ಯಮಿ ಜೀವಾ, 13 ಪುಟಗಳ ಡೆತ್ ನೋಟ್ ಬರೆದಿಟ್ಟು ನವೆಂಬರ್ 22ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ನನ್ನ ಸಾವಿಗೆಡಿವೈಎಸ್ ಪಿ ಕನಕಲಕ್ಷ್ಮೀ ಕಾರಣ ಎಂದು ಉಲ್ಲೇಖಿಸಿದ್ದರು. ಪ್ರಕರಣ ಸಂಬಂಧ ಕನಕಲಕ್ಷ್ಮೀ ಅವರನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.