HomeKarnatakaಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ರೈಲಿಗೆ ತಲೆ ಕೊಟ್ಟ ಪತಿ ಆತ್ಮಹತ್ಯೆ

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ರೈಲಿಗೆ ತಲೆ ಕೊಟ್ಟ ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಬಳಿ ಘಟನೆ ನಡೆದಿದೆ.

ರಮೇಶ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಶಿಲ್ಪಾ, ಗೆಳೆಯ ಸಂಜು ಜೊತೆಗಿರುವ ಫೋಟೋ, ಡೆತ್ ನೋಟ್ ಸ್ಟೇಟಸ್ ಹಾಕಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ರಮೇಶ್ -ಶಿಲ್ಪಾ ಮದುವೆಯಾಗಿದ್ದರು. ದಂಪತಿಗೆ ಸಂಜು ಫ್ಯಾಮಿಲಿ ಫ್ರೆಂಡ್ ಆಗಿದ್ದು, ಶಿಲ್ಪಾ ಜೊತೆಗೆ ಬಹಳ ಸಲುಗೆಯಿಂದ ಇದ್ದ. ಇತ್ತೀಚೆಗೆ ಸಂಜು ಮೇಲೆ ರಮೇಶ್ ಅನುಮಾನ ಪಡುತ್ತಿದ್ದ. ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನದಿಂದ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮ ಸಂಬಂಧದ ಬಗ್ಗೆ ಪತ್ನಿಯನ್ನು ಕೇಳಿದರೆ ಪ್ರತಿದಿನ ಜಗಳವಾಗುತ್ತಿತ್ತು. ಶಿಲ್ಪಾ ಮತ್ತು ಸಂಜುಗೆ ಶಿಕ್ಷೆ ಆಗಬೇಕೆಂದು ಡೆತ್ ನೋಟ್ ಬರೆದು ರಮೇಶ್ ಸೋಲದೇವನಹಳ್ಳಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್  ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular