HomeKarnatakaಅಭ್ಯರ್ಥಿಗಳ ಅಫಿಡವಿಟ್ ನಲ್ಲಿರುವ ಮಾಹಿತಿ ತಿಳಿಯಲು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ಅಭ್ಯರ್ಥಿಗಳ ಅಫಿಡವಿಟ್ ನಲ್ಲಿರುವ ಮಾಹಿತಿ ತಿಳಿಯಲು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ಧಾರವಾಡ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರದೊಂದಿಗೆ ಸಲ್ಲಿಸಿದ ಅಭ್ಯರ್ಥಿಗಳ ಅಫಿಡವೀಟ್‍ಗಳನ್ನು ನಾಮಪತ್ರ ಸಲ್ಲಿಸಿದ ದಿನದಂದೇ ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕ ಮತ್ತು ಚುನಾವಣಾ ಆಯೋಗದ ವೆಬ್‍ಸೈಟ್‍ದಲ್ಲಿ ಪ್ರಕಟಿಸಲಿದ್ದು, ಸಾರ್ವಜನಿಕರು ವೀಕ್ಷಿಸಬಹುದು.

ಭಾರತ ಚುನಾವಣಾ ಆಯೋಗದ ಸೂಚನೆಗಳ ಅನ್ವಯ, 11-ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ವೇಳಾಪಟ್ಟಿಯನ್ವಯ ನಾಮಪತ್ರಗಳ ಸ್ವೀಕೃತಿ ಪ್ರಕ್ರಿಯೆಯು ಏಪ್ರಿಲ್ 12, 2024 ರಿಂದ ಪ್ರಾರಂಭವಾಗಿದೆ.

ಅಭ್ಯರ್ಥಿಗಳು ತಮ್ಮ ನಾಮಪತ್ರಗಳೊಂದಿಗೆ ಸಲ್ಲಿಸಿದ (ನಮೂನೆ-26) ಅಫಿಡವೀಟ್‍ಗಳನ್ನು, ನಾಮಪತ್ರ ಸಲ್ಲಿಸಿದ ದಿನಾಂಕದಂದೇ ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾಫಲಕದಲ್ಲಿ ಹಾಗೂ ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ https://affidavit.eci.gov.in ನಲ್ಲಿ ಪ್ರಕಟಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೆಬ್‍ಸೈಟ್‍ದಲ್ಲಿ ಕ್ಯಾಂಡಿಡೆಟ್ ಅಫಿಡವೀಟ್ ಮ್ಯಾನೇಜ್ಮೆಂಟ್(Candidate Affidavit Management) ಪೇಜ್‍ನಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಂಡು, ನಂತರ ಧಾರವಾಡ ಲೋಕಸಭಾ ಮತಕ್ಷೇತ್ರ(Select State-Karnataka; Select Constituency-Dharwad) ಆಯ್ಕೆ ಮಾಡಿಕೊಂಡು, ಪಿಲ್ಟರ್(Filter)ಬಟನ್ ಒತ್ತುವ ಮೂಲಕ ನಾಮಪತ್ರದೊಂದಿಗೆ ಅಭ್ಯರ್ಥಿಯು ಸಲ್ಲಿಸಿದ ಅಫಿಡವೀಟ್ ಅನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular