ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಸ್ಫೋಟ: 7 ಜನ ಸಾವು, 40 ಮಂದಿ ಗಾಯ

ಅಫ್ಘಾನಿಸ್ತಾನದಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಶಿಯಾ ಮಸೀದಿಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 7 ಜನ ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ.

ಬಾಗ್ಲಾನ್‌ ನ ಪ್ರಾಂತೀಯ ರಾಜಧಾನಿ ಪೋಲ್-ಇ-ಖೋಮ್ರಿಯಲ್ಲಿ ಈ ಘಟನೆ ನಡೆದಿದೆ.

ಯಾವುದೇ ಸಂಘಟನೆ ತಕ್ಷಣದ ಹೊಣೆಗಾರಿಕೆ ಹೊತ್ತುಕೊಂಡಿಲ್ಲ. ಆದರೆ ಹಿಂದಿನ ದೊಡ್ಡ ಪ್ರಮಾಣದ ದಾಳಿಗಳಲ್ಲಿ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾಗಳನ್ನು ಗುರಿಯಾಗಿಸಿಕೊಂಡ ಇಸ್ಲಾಮಿಕ್ ಸ್ಟೇಟ್(IS) ಗುಂಪಿನ ಮೇಲೆ ಆರೋಪ ಕೇಳಿ ಬಂದಿದೆ.

ಆಗಸ್ಟ್ 2021 ರಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ನಂತರ IS ನ ಪ್ರಾದೇಶಿಕ ಅಂಗಸಂಸ್ಥೆಯು ದೇಶಾದ್ಯಂತ ಮಸೀದಿಗಳು ಮತ್ತು ಅಲ್ಪಸಂಖ್ಯಾತರ ಮೇಲೆ ದಾಳಿಗಳನ್ನು ಹೆಚ್ಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read