HomeLatest Newsಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿ: ಟೀಮ್ ಇಂಡಿಯಾ ಪ್ಲೇಯಿಂಗ್ 11 ಆಯ್ಕೆ ಬಗ್ಗೆ ಎಬಿ ಡಿವಿಲಿಯರ್ಸ್...

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿ: ಟೀಮ್ ಇಂಡಿಯಾ ಪ್ಲೇಯಿಂಗ್ 11 ಆಯ್ಕೆ ಬಗ್ಗೆ ಎಬಿ ಡಿವಿಲಿಯರ್ಸ್ ಪ್ರಶ್ನೆ

ನವದೆಹಲಿ: ಮುಂಬರುವ ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಭಾರತ ತಂಡದ ಅಂತಿಮ ಹನ್ನೊಂದರ ಬಳಗ ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಲಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ. ಪ್ರಮುಖವಾಗಿ ಯುವ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಸೂಕ್ತ ಬ್ಯಾಟಿಂಗ್ ಕ್ರಮಾಂಕ ಸಿಗುವುದೇ ಎನ್ನುವ ಸಂಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಾತನಾಡಿರುವ ಡಿವಿಲಿಯರ್ಸ್, ಭಾರತೀಯ ತಂಡದ ಬ್ಯಾಟಿಂಗ್ ಸಂಯೋಜನೆ ಬಗ್ಗೆ ಮುಕ್ತವಾಗಿ ಚರ್ಚಿಸಿದ್ದಾರೆ. ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಅವರಂತಹ ಆಟಗಾರರು ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತವಾಗಿರುವಾಗ, ತಿಲಕ್ ವರ್ಮಾ ಯಾವ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ತಿಲಕ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳುವುದು ಅಥವಾ ಹೊರಗಿಡುವುದು ಇಡೀ ತಂಡದ ಸಮತೋಲನದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಅವರು ವಿಶ್ಲೇಷಿಸಿದ್ದಾರೆ.

ನಾಯಕ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ಮತ್ತು ಸೂರ್ಯವಂಶಿ ಅವರಂತಹ ಪ್ರಮುಖ ಬ್ಯಾಟರ್ ಗಳಿದ್ದಾರೆ. ಜೊತೆಗೆ ಆಲ್ ರೌಂಡರ್ ಗಳ ಸಾಲಿನಲ್ಲಿ ತಿಲಕ್ ವರ್ಮಾ ಇದ್ದಾರೆ. ಹಾಗಾಗಿ ಅಂತಿಮ ಬಳಗದ ಸಂಯೋಜನೆ ಕಷ್ಟಕರವಾಗಿದ್ದು, ತಿಲಕ್ ಅವರಿಗೆ ಯಾವ ಕ್ರಮಾಂಕ ಸಿಗುತ್ತದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದಾಗ್ಯೂ ಭಾರತೀಯ ತಂಡವು ಅತ್ಯಂತ ಬಲವಾಗಿದೆ ಎಂದು ಹೊಗಳಿರುವ ಅವರು, ಟಿ20 ಮಾದರಿಯಲ್ಲಿ ಪ್ರಯೋಗಗಳಿಗೆ ಅವಕಾಶವಿರುತ್ತದೆ. ಆದರೆ ಅಪಾಯಕಾರಿ ಅಫ್ಘಾನಿಸ್ತಾನ್ ತಂಡದ ವಿರುದ್ಧ ಪ್ರತಿಯೊಬ್ಬ ಆಟಗಾರನಿಗೂ ಅವರ ಜವಾಬ್ದಾರಿಯನ್ನು ಸ್ಪಷ್ಟವಾಗಿ ತಿಳಿಸುವುದು ಅತ್ಯಗತ್ಯ ಎಂದಿದ್ದಾರೆ.

ಮತ್ತೊಂದೆಡೆ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಿನ ಈ ಐತಿಹಾಸಿಕ ಟಿ20 ಸರಣಿ ನಡೆಯಲಿದೆ. ದೆಹಲಿಯಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿರುವುದರಿಂದ ಭದ್ರತೆಯ ಕಾರಣಕ್ಕೆ ಸೆಪ್ಟೆಂಬರ್ 13 ರಂದು ನಡೆಯಬೇಕಿದ್ದ ಮೊದಲ ಪಂದ್ಯ ಮುಂದೂಡಲ್ಪಡಬಹುದು ಎನ್ನಲಾಗಿತ್ತು. ಆದರೆ ದೆಹಲಿ ಸಂಚಾರ ಪೊಲೀಸರೊಂದಿಗೆ ಮಾತುಕತೆ ನಡೆಸಲಾಗಿದ್ದು, ನಿಗದಿತ ವೇಳಾಪಟ್ಟಿಯಂತೆಯೇ ಪಂದ್ಯಗಳು ನಡೆಯಲಿವೆ ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ ಸ್ಪಷ್ಟಪಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular