ಕಾಬುಲ್: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಗ್ನೇಯ ಅಫ್ಘಾನಿಸ್ತಾನದಲ್ಲಿ ರಾತ್ರಿ 11:47ರ ಸುಮಾರಿಗೆ ಭೀಕರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ. ಕಟ್ಟಡಗಳು, ಮನೆಗಳು ಸಂಪೂರ್ಣ ನೆಲಸಮವಾಗಿದ್ದು, ಅವಸೇಷಗಳಡಿ ಸಿಲುಕಿ ಹಲವರು ಸಾವನ್ನಪ್ಪಿದ್ದಾರೆ.
ಇತ್ತೀಚಿನ ಮಾಹಿತಿ ಪ್ರಕಾರ 622 ಜನರು ಮೃತಪಟ್ಟಿದ್ದಾರೆ. 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭೂಕಂಪದಿಂದಾಗಿ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣ ನೆಲಸಮವಾಗಿವೆ. ಹಲವು ಹಳ್ಳಿಗಳಲ್ಲಿ ತೀವ್ರ ಹಾನಿಯುಂಟಾಗಿದ್ದು, ಒಂದೇ ಹಳ್ಳಿಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.