HomeLatest News29 ವರ್ಷಗಳ ನಂತರ ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ಪೂರ್ಣ ಪ್ರಮಾಣದ ಅಧಿಕಾರ: ಬಾಲಚಂದ್ರ ಜಾರಕಿಹೊಳಿ

29 ವರ್ಷಗಳ ನಂತರ ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ಪೂರ್ಣ ಪ್ರಮಾಣದ ಅಧಿಕಾರ: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ನಮಗೆ ಡಿಸಿಸಿ ಬ್ಯಾಂಕಿನ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿದೆ. 29 ವರ್ಷಗಳ ನಂತರ ಪೂರ್ಣ ಪ್ರಮಾಣದ ಅಧಿಕಾರ ದೊರೆತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಹಾಜನತೆಗೆ, ರೈತರಿಗೆ, ಶಾಸಕರಿಗೆ ಧನ್ಯವಾದಗಳು. ನಾವು ಇದ್ದರೇನೇ ಡಿಸಿಸಿ ಬ್ಯಾಂಕ್ ಎನ್ನುತ್ತಿದ್ದವರಿಗೆ ಉತ್ತರ ಕೊಡುತ್ತೇವೆ. ಡಿಸಿಸಿ ಬ್ಯಾಂಕ್ ಅನ್ನು ಸದೃಢಗೊಳಿಸಿ ನಾವು ಉತ್ತರ ನೀಡುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

4 ಸ್ಥಾನಗಳಲ್ಲಿ ಗೆಲುವು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ 7 ಸ್ಥಾನಗಳ ಪೈಕಿ 4 ಸ್ಥಾನಗಳಲ್ಲಿ ನಾವು ಜಯ ಸಾಧಿಸಿದ್ದೇವೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ರಾಮದುರ್ಗ, ಹುಕ್ಕೇರಿಯಲ್ಲಿ ಸೋತಿದ್ದೇವೆ. ಮೊದಲೇ ಹೇಳಿದ ಹಾಗೆಯೇ ನಾವು ಗೆದ್ದಿದ್ದೇವೆ. ಗೆಲ್ಲುವುದಿಲ್ಲ ಎಂದು ಗೊತ್ತಿದ್ದರೂ ಅಪಪ್ರಚಾರ ಮಾಡಿದರು. ಆದರೆ ಅದು ಯಾವುದೂ ಕೂಡ ವರ್ಕೌಟ್ ಆಗಿಲ್ಲ. ಜಾತಿ ಟ್ರಂಪ್ ಕಾರ್ಡ್ ವರ್ಕೌಟ್ ಆಗಿಲ್ಲ. ಜನ ಉತ್ತರ ನೀಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular