ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಕಾ‍ಶ್ ರೈ ದಾರಿ ತಪ್ಪಿದ್ದಾರೆ ; ಜೆಡಿಎಸ್ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಕಾ‍ಶ್ ರೈ ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್ ರೈ ಉರುಫ್ ಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ.. •ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ.

ಅಲ್ಲಿನ ಮಕ್ಕಳಿಗೆ ಒಳ್ಳೇ ಆಹಾರವಿಲ್ಲ, ನೀರೂ ಇಲ್ಲ. ಸರಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ‘ನಿರ್ದಿಗಂತʼಕ್ಕೆ ಹಣದ ಹೊಳೆ ಹರಿಸುತ್ತಿದೆ ಸರಕಾರ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ. Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ.. ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಳ್ಳಕಂಪನಿಗೆ ಕೋಟಿ ಕೋಟಿ ಸುರಿದಿರುವ ಕಾಂಗ್ರೆಸ್ ಸರಕಾರ, ನಿಮ್ಮ ‘ನಿರ್ದಿಗಂತʼಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಕಸ ಹೊಡೆಯೋರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವೋರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ!! ಹೆಂಗೆ? Just Asking.. ಅಷ್ಟೇ ಪ್ರಕಾಶ್ ರಾಜ್ ಅವರೇ..ಎಂದು ಜೆಡಿಎಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read