ಜಗದೀಶ್ ಶೆಟ್ಟರ್ ಬಳಿಕ ಶಾಸಕ ಜನಾರ್ಧನ ರೆಡ್ಡಿಗೆ ಬಿಜೆಪಿ ಗಾಳ?

ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಜಗದೀಶ್‌ ಶೆಟ್ಟರ್‌ ಬಳಿಕ ಇದೀಗ ಶಾಸಕ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿ ಪಕ್ಷಕ್ಕೆ ಕರೆತರುವ ಕುರಿತಂತೆ ಪ್ಲ್ಯಾನ್‌ ನಡೆಸಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ರಾಜ್ಯ ಬಿಜೆಪಿ ನಾಯಕರು ಬಿಜೆಪಿಯಿಂದ ಹೊರಗೆ ಹೋಗಿರುವ ಹಲವು ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಿದ್ದಾರೆ. ಈ ಪ್ರಯತ್ನದ ಭಾಗವಾಗಿ ಶಾಸಕ ಜನಾರ್ದನರೆಡ್ಡಿ ಅವರನ್ನು ಪಕ್ಷಕ್ಕೆ ಕರೆತರಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈ ನಡುವೆ ಜನಾರ್ದನ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಈ ಮೂಲಕ ಬಿಜೆಪಿಗೆ ಸೇರ್ಪಡೆ ಅಥವಾ ಬೆಂಬಲದ ಸುಳಿವು ನೀಡಿದ್ದಾರೆ. ಬಹಿರಂಗವಾಗಿಯೇ ರೆಡ್ಡಿ ಮೋದಿಯನ್ನು ಹೊಗಳಿದ್ದಾರೆ. ಶ್ರೀರಾಮಮಂದಿರ ನಿರ್ಮಾಣದಲ್ಲಿ ಮೋದಿಜೀಯವರನ್ನು ಅಭಿನಂದಿಸಬೇಕು. ಮೋದಿಯವರು ಇಡೀ ವಿಶ್ವವೇ ತಿರುಗಿ ನೋಡುವ ಕೆಲಸ ಮಾಡಿದ್ದಾರೆ. 500 ವರ್ಷದ ಹೋರಾಟಕ್ಕೆ ಫಲ ಇದೀಗ ಬಂದಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read