ಅತ್ಯಂತ ದುಬಾರಿ ರೋಲ್ಸ್ ರಾಯ್ಸ್ ಕಲ್ಲಿನನ್ ಖರೀದಿಸಿದ ಶಾರುಖ್​

ಪಠಾಣ್ ಚಿತ್ರದ ಯಶಸ್ಸಿನ ಬಳಿಕ ನಟ ಶಾರುಖ್ ಖಾನ್ ಅವರು ಹೊಚ್ಚ ಹೊಸ ಐಷಾರಾಮಿ ಎಸ್‌ಯುವಿಯನ್ನು ಖರೀದಿಸಿದ್ದಾರೆ. ರೋಲ್ಸ್ ರಾಯ್ಸ್ ಕಲ್ಲಿನನ್ ಬ್ಲ್ಯಾಕ್ ಬ್ಯಾಡ್ಜ್ ಅನ್ನು ಅವರು ಖರೀದಿಸಿದ್ದು, ಇದರ ಎಕ್ಸ್ ಶೋರೂಂ ಪ್ರಕಾರ ರೂ.8.2 ಕೋಟಿಯಾಗಿದೆ. ವರದಿಗಳ ಪ್ರಕಾರ, ಈ ಕಾರು ಸದ್ಯಕ್ಕೆ ಭಾರತದಲ್ಲಿ ಮಾರಾಟವಾಗುತ್ತಿರುವ ಅತ್ಯಂತ ದುಬಾರಿ ಎಸ್‍ಯುವಿ ಎಂದೆನಿಸಿದೆ.

ಕಂಪನಿಯು ಕಸ್ಟಮೈಸ್ ಆಯ್ಕೆಗಳನ್ನು ನೀಡುತ್ತದೆ. ಕಸ್ಟಮೈಸ್ ನಂತರ ಈ ಕಾರಿನ ಬೆಲೆಯು ರೂ.10 ಕೋಟಿಗಿಂತ ಹೆಚ್ಚು ಬೆಲೆಯನ್ನು ಹೊಂದಿದೆ ಎನ್ನಲಾಗಿದೆ. ಶಾರುಖ್​ ಅವರು, ಆರ್ಕ್ಟಿಕ್ ವೈಟ್‌ನ ಕ್ಲಾಸಿ ಬಣ್ಣದ ರೋಲ್ಸ್ ರಾಯ್ಸ್ ಕಲ್ಲಿನನ್ ಕಾರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಕಾರಿನ ಇಂಟೀರಿಯರ್‌ಗಾಗಿ ಕೋಬಾಲ್ಟೊ ನೀಲಿ ಬಣ್ಣದೊಂದಿಗೆ ಬೆರಗುಗೊಳಿಸುವ ಸಂಪೂರ್ಣ ಬಿಳಿ ಲೆದರ್ ಒಳಾಂಗಣವನ್ನು ಅವರು ಆಯ್ಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈ ರೋಲ್ಸ್ ರಾಯ್ಸ್ ಕಲ್ಲಿನನ್ ಬ್ಲ್ಯಾಕ್ ಬ್ಯಾಡ್ಜ್ ಕಾರು 6.75-ಲೀಟರ್ ಟ್ವಿನ್-ಟರ್ಬೊ V12 ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 600 ಬಿಎಚ್‍ಪಿ ಪವರ್ ಮತ್ತು 900 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಪವರ್ ಅಂಕಿಅಂಶಗಳನ್ನು ಸಾಮಾನ್ಯ ಕಲ್ಲಿನಾನ್‌ಗೆ ಹೋಲಿಸಿದರೆ, 29 ಬಿಎಚ್‍ಪಿ ಪವರ್ ಮತ್ತು 50 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read