BREAKING : ‘ಸ್ಪಂದನಾ’ ಸಾವಿನ ಬೆನ್ನಲ್ಲೇ ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನದ ಬೆನ್ನಲ್ಲೇ ಮಂಡ್ಯ ಮೂಲದ ಕಿರುತೆರೆ ನಟ ಪವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಡ್ಯದ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ ಪವನ್ ಹಿಂದಿ ಮತ್ತು ತಮಿಳು ಕಿರುತೆರೆಯಲ್ಲಿ ನಟಿಸಿ ಹೆಸರು ಮಾಡಿದ್ದರು. ಆದರೆ ಅತೀ ಚಿಕ್ಕ ವಯಸ್ಸಲ್ಲೇ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇಂದು ಕಿರುತೆರೆ ನಟ ಪವನ್ ಅವರ ಅಂತ್ಯಕ್ರಿಯೆ ಸ್ವಗ್ರಾಮವಾದ ಮಂಡ್ಯದ ಕೆಆರ್ ಪೇಟೆಯ ಹರಿಹರಪುರ ಗ್ರಾಮದಲ್ಲಿ ನಡೆಯಲಿದೆ.

ಆಗಸ್ಟ್ 16ರಂದು ಪವನ್ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದ್ದು, ಪರಿಣಾಮ ಮೃತಪಟ್ಟಿದ್ದಾರೆ. ಆದರೆ ಅತೀ ಚಿಕ್ಕ ವಯಸ್ಸಲ್ಲೇ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ನಿಜಕ್ಕೂ ಆಘಾತಕಾರಿ ವಿಚಾರವಾಗಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿರುವುದು ಬಹಳ ಆತಂಕಕ್ಕೆ ಕಾರಣವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read