HomeKarnataka`ಶಕ್ತಿ ಯೋಜನೆ’ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ!

`ಶಕ್ತಿ ಯೋಜನೆ’ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ!

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗಿದ್ದು, ಪ್ರತಿ ತಿಂಗಳ ಅಂತ್ಯದೊಳಗೆ ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯದ ಹಣವನ್ನು ರಾಜ್ಯ ಸಾರಿಗೆ ಸಂಸ್ಥೆಯ ನಿಗಮಗಳಿಗೆ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿಗಮಗಳು ನಿರ್ಧರಿಸಿವೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆಯನ್ನು ಜೂನ್ 11 ರಂದು ಜಾರಿ ಮಾಡಲಾಗಿದೆ. ಜೂನ್ 11 ರಿಂದ 30 ರವರೆಗೆ ರಾಜ್ಯಾದ್ಯಂತ ಒಟ್ಟು 10.54 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, ಅದರ ಟಿಕೆಟ್ ಮೌಲ್ಯ 248.30 ಕೋಟಿ ರೂ. ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರು ಉಚಿತ ಪ್ರಯಾಣದ ಟಿಕೆಟ್ ಮೌಲ್ಯದ ಹಣವನ್ನು ರಾಜ್ಯ ಸರ್ಕಾರವು ಪ್ರತಿ ತಿಂಗಳ ಅಂತ್ಯದೊಳಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಗಮಗಳಿಗೆ ನೀಡಬೇಕು. ಹಣವನ್ನು ಸರ್ಕಾರ ಪಾವತಿ ಮಾಡಿದ್ರೆ ನಿಗಮಗಳ ವೇತನ ಸೇರಿದಂತೆ ನಿರ್ವಹಣಾ ಕಾರ್ಯಕ್ಕೆ ಅನುಕೂಲವಾಗಲಿದೆ ಎಂದು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಲು ಮುಂದಾಗಿವೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular