BREAKING : ಶಿಕ್ಷಕಿ ‘ದೀಪಿಕಾ’ ಹತ್ಯೆ ಬೆನ್ನಲ್ಲೇ ಮಂಡ್ಯದಲ್ಲಿ ಮತ್ತೊಂದು ಭೀಕರ ಕೃತ್ಯ , ಮಹಿಳೆಯ ರೇಪ್ & ಮರ್ಡರ್..!

ಮಂಡ್ಯ : ಮೇಲುಕೋಟೆ ಶಿಕ್ಷಕಿ ‘ದೀಪಿಕಾ’ ಹತ್ಯೆ ಬೆನ್ನಲ್ಲೇ ಮಂಡ್ಯದಲ್ಲಿ ಮತ್ತೊಂದು ಭೀಕರ ಕೃತ್ಯ ನಡೆದಿದ್ದು, ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಮಂಡ್ಯದ ಕಲ್ಲಹಳ್ಳಿ ಸಮೀಪದ ರೈಲ್ವೇ ಗೇಟ್ ಬಳಿಯ ಮೋರಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದ ಸ್ಥಳಕ್ಕೆ ಮಂಡ್ಯದ ಸೆಂಟ್ರಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ . ಕೇವಲ 2 ದಿನದ ಅಂತರದಲ್ಲಿ ಇಬ್ಬರು ಮಹಿಳೆಯರ ಕೊಲೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ.ಮೇಲುಕೋಟೆಯಲ್ಲಿ ಖಾಸಗಿ ಶಾಲಾ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪಾಂಡವಪುರ ತಾಲೂಕಿನ ಮೇಲುಕೋಟೆಯ ಯೋಗ ನರಸಿಂಹ ದೇವಸ್ಥಾನದ ಬಳಿ ಜನವರಿ 20ರಂದು ನಾಪತ್ತೆಯಾಗಿದ್ದ ದೀಪಿಕಾ ವಿ.ಗೌಡ (28) ಶವ ಪತ್ತೆಯಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read