ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ತಾ.ಪಂ, ಜಿ.ಪಂ, ಬಿಬಿಎಂಪಿ ಚುನಾವಣೆ –ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಹೈಕಮಾಂಡ್ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು ಮಾಡಲೇಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

https://twitter.com/siddaramaiah/status/1793949333949129187

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read