HomeIndiaಜೈಲು ಶಿಕ್ಷೆಗೆ ಒಳಗಾದ ಸಂಸದ ಅಫ್ಜಲ್ ಅನ್ಸಾರಿ ಅನರ್ಹ

ಜೈಲು ಶಿಕ್ಷೆಗೆ ಒಳಗಾದ ಸಂಸದ ಅಫ್ಜಲ್ ಅನ್ಸಾರಿ ಅನರ್ಹ

ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾದ ಹಿನ್ನಲೆಯಲ್ಲಿ ಗಾಜಿಪುರ ಬಿ.ಎಸ್.ಪಿ. ಸಂಸದ, ಗ್ಯಾಂಗ್ ಸ್ಟರ್ ಅಫ್ಜಲ್ ಅನ್ಸಾರಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಿಕ್ಷೆ ಪ್ರಕಟಿಸಿದೆ. ದರೋಡೆಕೋರ, ರಾಜಕಾರಣಿ ಮುಕ್ತಾರ್ ಅನ್ಸಾರಿಯ ಹಿರಿಯ ಸಹೋದರ, ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ಅವರನ್ನು ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಪರಿಗಣಿಸಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ನಂತರ ಸೋಮವಾರ ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಫ್ಜಲ್‌ ಗೆ ಶಿಕ್ಷೆಯಾದ ಮೊದಲ ಪ್ರಕರಣ ಇದಾಗಿದೆ. ಯುಪಿ ಪೊಲೀಸರ ದಾಖಲೆಯ ಪ್ರಕಾರ ಅಫ್ಜಲ್ ವಿರುದ್ಧ 7 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಕಳೆದ ವಾರ, ಉತ್ತರ ಪ್ರದೇಶದ ಗಾಜಿಪುರದ ನ್ಯಾಯಾಲಯವು 2007 ರ ದರೋಡೆಕೋರರ ಕಾಯಿದೆ ಪ್ರಕರಣದಲ್ಲಿ ಅಫ್ಜಲ್ ಮತ್ತು ಅವನ ಸಹೋದರ ಮುಖ್ತಾರ್ ಅನ್ಸಾರಿಗೆ ಕ್ರಮವಾಗಿ ನಾಲ್ಕು ವರ್ಷ ಮತ್ತು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ ಸಂಸತ್ತಿನ ಸದಸ್ಯರನ್ನು ದೋಷಿ ಎಂದು ಸಾಬೀತುಪಡಿಸಿದರೆ ಮತ್ತು ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಜೈಲು ಶಿಕ್ಷೆಗೆ ಗುರಿಪಡಿಸಿದರೆ ಅನರ್ಹಗೊಳಿಸಲಾಗುತ್ತದೆ.

ಕಳೆದ ತಿಂಗಳು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಮೋದಿ ಸರ್ ನೇಮ್ ಹೇಳಿಕೆಯ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ನಂತರ ಅದೇ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular