ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿದ್ದನ್ನು ಪ್ರಶ್ನಿಸಿ ಬಿಜೆ̧ಪಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಈ ಕುರಿತ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಖರ್ಗೆ ಅವರನ್ನು ಇತರ ಕಾಂಗ್ರೆಸ್ ನಾಯಕರಿಂದ ದೂರದಲ್ಲಿ ಕೂರಿಸಲಾಗಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ಖರ್ಗೆ ಜೀ ಅವರಿಗೆ ಪ್ರತ್ಯೇಕ ಕುರ್ಚಿ ಹಾಕುವುದೇ ಆಗಿದ್ದರೆ, ಅದನ್ನು ಸಭಾಂಗಣದ ಮಧ್ಯದಲ್ಲಿ ಏಕೆ ಹಾಕಲಿಲ್ಲ ? ಅವರು ಪಕ್ಷದ ಅಧ್ಯಕ್ಷರು ಮತ್ತು ಹಿರಿಯರಾಗಿದ್ದಾರೆ” ಎಂದು ಮಾಳವೀಯ ಪ್ರಶ್ನಿಸಿದ್ದಾರೆ. ಈ ಆಸನದ ವ್ಯವಸ್ಥೆಯು ಸರಿಯಾಗಿ ಕಾಣುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.
ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಯ 84 ನೇ ಅಧಿವೇಶನಕ್ಕೂ ಮುಂಚಿತವಾಗಿ ಈ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಆರು ದಶಕಗಳಿಗಿಂತಲೂ ಹೆಚ್ಚು ಕಾಲದ ನಂತರ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ ನಡೆಯುತ್ತಿರುವುದು ಇದೇ ಮೊದಲು.
ಮಂಗಳವಾರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಸ್ಮಾರಕದಲ್ಲಿ ಸಭೆ ಸೇರಿತ್ತು. ಮುಖ್ಯ ಎಐಸಿಸಿ ಕಾರ್ಯಕ್ರಮ ಇಂದು ಸಬರಮತಿ ನದಿ ತೀರದಲ್ಲಿ ನಡೆಯಲಿದೆ. ಈ ನಡುವೆ ಖರ್ಗೆ ಅವರ ಆಸನದ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
अगर खड़गे जी के लिए अलग कुर्सी लगानी ही थी, तो उसे बीच में क्यों नहीं लगाया गया? वह पार्टी के अध्यक्ष हैं और बुजुर्ग भी हैं। pic.twitter.com/hNS1ey5YDR
— Amit Malviya (@amitmalviya) April 9, 2025