HomeIndiaಮಕ್ಕಳಿಗೆ ವಯಸ್ಸಿನ ಆಧಾರದ ಮೇಲೆ ಜಾಲತಾಣ ನಿಷೇಧ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಹೇಳಿಕೆ

ಮಕ್ಕಳಿಗೆ ವಯಸ್ಸಿನ ಆಧಾರದ ಮೇಲೆ ಜಾಲತಾಣ ನಿಷೇಧ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಹೇಳಿಕೆ

ನವದೆಹಲಿ: 16 ವರ್ಷದೊಳಗಿನ ಮಕ್ಕಳಿಗೆ ಆಸ್ಟ್ರೇಲಿಯಾ ಮೊದಲಾದ ದೇಶಗಳಲ್ಲಿ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸಿರುವಂತೆ ಭಾರತದಲ್ಲಿಯೂ ವಯಸ್ಸಿನ ಆಧಾರದ ಮೇಲೆ ಮಕ್ಕಳಿಗೆ ಜಾಲತಾಣ ಬಳಕೆ ನಿರ್ಬಂಧಿಸಲು ಚರ್ಚೆ ನಡೆಯುತ್ತಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ವಯಸ್ಸಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣ ಬಳಕೆ ಮೇಲೆ ನಿಯಂತ್ರಣ ಇರಬೇಕೆಂದು ಅನೇಕ ದೇಶಗಳು ಒಪ್ಪಿಕೊಂಡ ವಿಷಯವಾಗಿದೆ. ಕೇಂದ್ರ ಸರ್ಕಾರ ಈಗ ವಯಸ್ಸಿನ ಆಧಾರದ ಮೇಲೆ ಸೋಶಿಯಲ್ ಮೀಡಿಯಾ ಬಳಕೆ ನಿರ್ಬಂಧ ಮತ್ತು ಡೀಪ್ ಫೇಕ್ ಗಳ ಹಾವಳಿ ತಡೆ ಕುರಿತಾಗಿ ಚರ್ಚೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

16 ವರ್ಷದೊಳಗಿನ ಮಕ್ಕಳು ಜಾಲತಾಣ ಬಳಸುವುದನ್ನು ನಿರ್ಬಂಧಿಸಲು ಸಾಮಾಜಿಕ ವೇದಿಕೆಗಳೊಂದಿಗೆ ಚರ್ಚೆಗಳನ್ನು ನಡೆಸಲಾಗಿದೆ. ಈ ನಿಟ್ಟಿನಲ್ಲಿ ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಎಕ್ಸ್(ಟ್ವಿಟರ್) ಮತ್ತು ಇತರ ಪ್ರಮುಖ ವೇದಿಕೆಗಳಿಂದ ಪ್ರತಿಕ್ರಿಯೆಗಳನ್ನು ಸರ್ಕಾರ ಕೇಳಿ ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular