HomeKarnatakaಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ 2 ವರ್ಷ ಹೆಚ್ಚಳ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ ನೇಮಕಾತಿ ವಯೋಮಿತಿ ಎರಡು ವರ್ಷ ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿ ಹುದ್ದೆ ಬರ್ತಿಗೆ ಎರಡು ವರ್ಷ ವಯೋಮಿತಿ ಹೆಚ್ಚಳದ ಸಂಬಂಧ ಪ್ರಸ್ತಾವನೆ ಸ್ವೀಕೃತವಾಗಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಎಸ್.ವಿ. ಸಂಕನೂರ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರ ನೀಡಿದ್ದಾರೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಕೋವಿಡ್  ಹಿನ್ನೆಲೆಯಲ್ಲಿ 2022 ರಲ್ಲಿ ಎರಡು ವರ್ಷಗಳ ವಯೋಮಿತಿ ಹೆಚ್ಚಳ ಮಾಡಲಾಗಿದೆ. ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಎರಡು ವರ್ಷ ವಯೋಮಿತಿ ಹೆಚ್ಚಳ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜತೆಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular