BIG NEWS : 2025-26 ನೇ ಸಾಲಿನ ‘1 ನೇ ತರಗತಿ’, ‘LKG & UKG’ ದಾಖಲಾತಿಗೆ ವಯೋಮಿತಿ ನಿಗದಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು : ಮಕ್ಕಳನ್ನು ಪ್ರಾಥಮಿಕ ಶಾಲಾ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಜ್ಯ ನೀತಿ ಆಯೋಗದ ಶಿಫಾರಸು / ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ಸಂಖ್ಯೆ : ಇಪಿ 260 ಪಿಜಿಸಿ 2021. ದಿನಾಂಕ : 26.07.2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ 5 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದಕ್ಕೆ ಒಂದು ಬಾರಿಯ ಕ್ರಮವಾಗಿ ಸಡಿಲಿಕೆಯನ್ನು ನೀಡಿ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿರುವ ಕಾರಣಗಳಿಂದ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 1ನೇ ತಾರೀಖಿಗೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಿದೆ.

ಮುಂದುವರೆದು, 2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ ಸಂಖ್ಯೆ : ಇಪಿ 100 ಪಿಜಿಸಿ 2024, ದಿನಾಂಕ : 26.06.2024ರಲ್ಲಿ ಈಗಾಗಲೇ ಎಲ್.ಕೆ.ಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗಧಿಪಡಿಸಲಾಗಿರುತ್ತದೆ. ಅದರಂತೆ 2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳತಕ್ಕದ್ದು.

ಮೇಲ್ಕಂಡ ಆದೇಶಗಳನ್ನು ತಮ್ಮ ಆಡಳಿತ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಉಲ್ಲೇಖ ಸರ್ಕಾರದ ಆದೇಶ ಪ್ರತಿಯನ್ನು ಇದರೊಂದಿಗೆ ಅನುಬಂಧಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read