HomeLatest NewsBIG NEWS : ರಾಜ್ಯದಲ್ಲಿ ಗ್ರೂಪ್ ಬಿ, ಗ್ರೂಪ್ ಸಿ ನೇಮಕಾತಿ ವಯೋಮಿತಿ 2...

BIG NEWS : ರಾಜ್ಯದಲ್ಲಿ ಗ್ರೂಪ್ ಬಿ, ಗ್ರೂಪ್ ಸಿ ನೇಮಕಾತಿ ವಯೋಮಿತಿ 2 ವರ್ಷ ಸಡಿಲಿಕೆ : ಸರ್ಕಾರದಿಂದ ಮಹತ್ವದ ಆದೇಶ


ಬೆಂಗಳೂರು : ರಾಜ್ಯದಲ್ಲಿ ಗ್ರೂಪ್ ಬಿ, ಗ್ರೂಪ್ ಸಿ ನೇಮಕಾತಿ ವಯೋಮಿತಿ 2 ವರ್ಷ ಸಡಿಲಿಕೆ ಮಾಡಿ ಸರ್ಕಾರದ ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ 25.11 2024ರ ದಿನಾಂಕ 29.03.2025ರ ಮತ್ತು ದಿನಾಂಕ 11.04.2025ರ ಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ದಿನಾಂಕ: 28-10-2024 ರಿಂದ ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿರುತ್ತದೆ.

ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ- ಎ. ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ -ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ. ಮುಂದುವರೆದು. ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತದೆ.ಮೇಲ್ಕಂಡ ಹಿನ್ನಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ನೀಡಲು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.

    For Latest News Updates, Join Our Whatsapp Community🚩
    ranjith
    ranjith
    Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
    RELATED ARTICLES

    Most Popular