BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಅಗ್ನಿಪಥ್’ ಸ್ಥಗಿತ: ಸೇನೆಯಲ್ಲಿ ಹಳೆ ನೇಮಕಾತಿ ಮರು ಜಾರಿ

ನವದೆಹಲಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸೇನೆಯಲ್ಲಿ ನೇಮಕಾತಿಗಾಗಿ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ರದ್ದುಗೊಳಿಸಿ ಹಳೇ ನೇಮಕಾತಿ ಪದ್ಧತಿ ಮರು ಜಾರಿಗೊಳಿಸುವುದಾಗಿ ಹೇಳಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಅಗ್ನಿ ವೀರರ ನೇಮಕಾತಿ ರದ್ದು ಮಾಡುವುದಾಗಿ ಘೋಷಿಸಿದ್ದಾರೆ.

ಕೇವಲ ನಾಲ್ಕು ವರ್ಷಗಳ ಅವಧಿಗೆ ಸೇನೆಯಲ್ಲಿ ಯುವಕರಿಗೆ ಗುತ್ತಿಗೆ ಕೆಲಸ ನೀಡುವ ಅಗ್ನಿವೀರ್ ಸೇನಾ ನೇಮಕಾತಿ ಯೋಜನೆ ರದ್ದುಗೊಳಿಸಿ ಹಳೆಯ ಪದ್ಧತಿಯನ್ನು ಮರು ಜಾರಿಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಮೂರು ಸೇನೆಗಳ ಸೇನಾಪಡೆಗಳ ಮಹಾ ದಂಡ ನಾಯಕರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಯುವ ಜನರನ್ನು ತೊಂದರೆಗೆ ಸಿಲುಕಿಸುವ ಅಗ್ನಿಪಥ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು. ಇದರಿಂದ ನಾಲ್ಕು ವರ್ಷಗಳ ಬಳಿಕ ಹೊರಬರುವ ಅಗ್ನಿವೀರರಿಗೆ ಮತ್ತೆ ಉದ್ಯೋಗ ಹುಡುಕುವುದು ಕಷ್ಟವಾಗುತ್ತದೆ. ಅಗ್ನಿಪಥ ಯೋಜನೆ ಘೋಷಣೆಗೆ ಮೊದಲು ಸೇನೆಗೆ ಆಯ್ಕೆಯಾಗಿದ್ದ ಎರಡು ಲಕ್ಷ ಯುವಕರಿಗೆ ಪ್ರಕ್ರಿಯೆಯನ್ನೇ ರದ್ದುಗೊಳಿಸಿರುವುದಾಗಿ ತಿಳಿಸಿ ಅತಂತ್ರಕ್ಕೆ ಸಿಲುಕಿಸಲಾಗಿದೆ. ಅವರಿಗೂ ಕೂಡಲೇ ನೇಮಕಾತಿ ಆದೇಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read