HomeAutoShocking Video: ಟೋಲ್ ಸಿಬ್ಬಂದಿಯನ್ನು ಬಾನೆಟ್ ಮೇಲೆ ಎಳೆದೊಯ್ದ ಕಾರು ಚಾಲಕ

Shocking Video: ಟೋಲ್ ಸಿಬ್ಬಂದಿಯನ್ನು ಬಾನೆಟ್ ಮೇಲೆ ಎಳೆದೊಯ್ದ ಕಾರು ಚಾಲಕ

ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಯನ್ನು ತನ್ನ ಕಾರಿನ ಬಾನೆಟ್ ಮೇಲೆ ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ ಎಳೆದೊಯ್ದು ನಂತರ ರಸ್ತೆಯ ಬದಿಗೆ ಎಸೆದಿದ್ದಾನೆ. ಖಂಡೌಲಿ ಟೋಲ್ ಪ್ಲಾಜಾದಲ್ಲಿ ಫಾಸ್ಟ್‌ಟ್ಯಾಗ್ ಕಪ್ಪುಪಟ್ಟಿಯಲ್ಲಿದ್ದ ಕಾರಣ ಟೋಲ್ ಶುಲ್ಕವನ್ನು ಸಿಬ್ಬಂದಿ ಕೇಳಿದ್ದಕ್ಕೆ ಈ ಘಟನೆ ಸಂಭವಿಸಿದೆ.

ಟೋಲ್ ಸಿಬ್ಬಂದಿ ಚಾಲಕನ ಬಳಿ ಫಾಸ್ಟ್‌ಟ್ಯಾಗ್ ಬಗ್ಗೆ ವಿಚಾರಿಸಿದ್ದಾರೆ. ಇದರಿಂದ ಕೋಪಗೊಂಡ ಚಾಲಕ, ಸಿಬ್ಬಂದಿಯನ್ನು ಕೊಲ್ಲಲು ಯತ್ನಿಸಿದ್ದು, ಸಿಬ್ಬಂದಿ ಬಾನೆಟ್ ಮೇಲೆ ಹಾರುವ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ. ಚಾಲಕ ಅಲ್ಲಿಂದ ವೇಗವಾಗಿ ಪರಾರಿಯಾಗಿದ್ದಾನೆ. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ಕುರಿತು ಮಾಹಿತಿ ತಿಳಿದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಖಂಡೌಲಿ ಪೊಲೀಸ್ ಠಾಣಾ ತಂಡವು ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡ ಟೋಲ್ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular