ಮಂಡ್ಯ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೃಷಿ ವಿಜ್ಞಾನಿ ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರ ಮೃತದೇಹ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ ಮೆಂಟ್ ನಲ್ಲಿ ಪತ್ನಿ ಜೊತೆ ವಾಸವಾಗಿದ್ದ ಡಾ.ಸುಬ್ಬಣ್ಣ ಮೇ.7ರಿಂದ ನಾಪತ್ತೆಯಾಗಿದ್ದರು.
ಇದೀಗ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೃಷ್ಣಿ ವಿಜ್ಞಾನಿಯಾಗಿದ್ದ ಸುಬ್ಬಣ್ಣ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.