ಧಾರವಾಡ : ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಮತ್ತು ಕೃಷಿ ಮಹಿಳೆ ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.
ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಆಹಾರದ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದನ್ನು ಕೃಷಿ ವಿವಿಗಳು ಗಂಭೀರವಾಗಿ ಪರಿಗಣಿಸಬೇಕು. ಜನಸಂಖ್ಯೆ ಬೆಳೆದ ಪ್ರಮಾಣದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಇದು ಕೃಷಿಮೇಳ ಅμÉ್ಟ ಅಲ್ಲ; ರೈತ ಮೇಳವಾಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ ನಡೆಸಬೇಕು. ಇದಕ್ಕೆ ಅಗತ್ಯವಾದ ಹಣಕಾಸಿನ ನೆರವನ್ನು ಸಂಪೂರ್ಣವಾಗಿ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.
ನಮ್ಮ ಸರಕಾರದಲ್ಲಿ ಕೃಷಿಗೆ ಆದ್ಯತೆ ನೀಡಿದ್ದೇವೆ. ರೈತರಿಗೆ ಸಾಲ, ಗೊಬ್ಬರ, ಬೀಜ, ಕೃಷಿ ಯಂತ್ರೋಪಕರಣಗಳ ವಿತರಣೆ, ಹೊಸ ತಳಿಗಳ ಸಂಶೋಧನೆಗೆ ಸಹಕಾರ ನೀಡುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಕರ್ನಾಟಕವು ಹಾಲು ಉತ್ಪಾದನೆಯಲ್ಲಿ ರಾಷ್ಟ್ರಕ್ಕೆ ಎರಡನೆಯ ಸ್ಥಾನದಲ್ಲಿದೆ. ಒಂದು ಕೋಟಿ ಲೀಟರ್ ಹಾಲನ್ನು ಪ್ರತಿದಿನ ಉತ್ಪಾದಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಕ್ಕೆ ನಂಬರ ಒನ್ ರಾಜ್ಯವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ರೈತರಿಗೆ ಹಾಲು ಉತ್ಪಾದನೆಗೆ ಪೆÇ್ರತ್ಸಾಹ ನೀಡಲಾಗುತ್ತಿದೆ. ಸದ್ಯದಲ್ಲೇ ಗುಜರಾತ್ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಒನ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು, ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪೆÇ್ರೀತ್ಸಾಹ ನೀಡುತ್ತಿದ್ದೇವೆ ಎಂದರು.
ಕೃಷಿ ವಿವಿಗಳು ಲ್ಯಾಬ್ ಟು ಲ್ಯಾಂಡ್ ಜೊತೆಗೆ ಲ್ಯಾಂಡ್ ಟು ಲ್ಯಾಬ್ ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ಕೃಷಿ ವಿವಿಗಳಿಗೆ ಕರೆ ನೀಡಿದರು.
ಪ್ರತಿಯೊಬ್ಬರು ಪ್ರಗತಿಪರ ರೈತರಾಗಬೇಕು. ಕರ್ನಾಟಕದಲ್ಲಿ ಮಳೆ ಆಧಾರಿತ ಕೃಷಿ ಇದೆ. ನೀರಾವರಿ ಆದಾರಿತ ಶೇ.40 ಕ್ಕಿಂತ ಕಡಿಮೆ ಭೂಮಿ ಇದೆ. ಶೇ.60 ರಷ್ಟು ಭೂಮಿ ಮಳೆ ಆಶ್ರಿತವಾಗಿದೆ. ಇಂತಹ ಭೂಮಿಗೆ ಒಗ್ಗುವ ಬೀಜ, ಬೆಳೆ ಸಂಶೋಧನೆ ಆಗಬೇಕು. ಹೊಸ ಬೀಜ, ತಂತ್ರಜ್ಞಾನ ಸಿಗಬೇಕು. ಅದನ್ನು ರೈತರಿಗೆ ತಲುಪಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಇವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕ್ರಮ ತೆಗೆದುಕೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಸಿಎಂ ಸೂಚಿಸಿದರು.
ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ ಎಂದರು.ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದರು.
ರಾಜ್ಯದಲ್ಲಿ 80 ಲಕ್ಷ ಹೆಕ್ಟೆರ ಕಿಂತಲೂ ಹೆಚ್ಚು ಬಿತ್ತನೆ ಆಗಿದ್ದರೂ, ಮುಂಗಾರು ಮಳೆಗೆ 5 ಲಕ್ಷ ಹೆಕ್ಟೆರ ಕಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಆಗಿದೆ. ಈ ಕುರಿತು ಜಂಟಿ ಸಮೀಕ್ಷೆ ಮಾಡಿ ತಕ್ಷಣ ವರದಿ ನೀಡಲು ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿ, ಸಿಇಓಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ದೇಶದ ಜಾತಿ ವ್ಯವಸ್ಥೆ, ಚಲನೆ ಇಲ್ಲದ ವ್ಯವಸ್ಥೆ. ನಮಗೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಜಾತಿ ಹೋಗಿಲ್ಲ; ಸಮಾನತೆ ಸಮಾಜದಲ್ಲಿ ಬಂದಿಲ್ಲ, ಪ್ರಜಾಪ್ರಭುತ್ವದ ರಾಷ್ಟ್ರ ನಮ್ಮದು. ಸುಧಾರಣೆ ಆಗಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾತನಾಡಿ, ವ್ಯವಸಾಯ ಮಾಡಿ, ಲಾಭ ತೋರಿಸಿಕೊಟ್ಟು, ಕೃಷಿ ಲಾಭದಾಯಕವಾಗಿದೆ ಎಂಬುದನ್ನು ರೈತರು ದೃಡಪಡಿಸಿದ್ದಾರೆ. ನಮ್ಮ ಸರಕಾರ ಕೃಷಿಗೆ ಆಧ್ಯತೆ ನೀಡಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯ ನೂತನ ಸಂಶೋಧನೆ, ರೈತ ಉಪಯುಕ್ತ ಕಾರ್ಯಗಳ ಮೂಲಕ ಹೆಸರುಗಳಿಸಿದೆ ಎಂದು ಹೇಳಿದರು.ಪ್ರತಿ ವರ್ಷ ನಡೆಯುವ ಕೃಷಿಮೇಳ ರೈತರ ಜಾತ್ರೆ ಆಗಿದೆ. ಉತ್ತರ ಕರ್ನಾಟಕದ ರೈತರಿಗೆ ಹೊಸತನ್ನು ಈ ಕೃಷಿಮೇಳ ಪರಿಚಯಿಸುತ್ತಿದೆ. ರಾಗಿಯನ್ನು ಬಡಜನರಿಗೆ ಪಡಿತರ ಮೂಲಕ ಹಂಚಲಾಗುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ. ಸಿರಿಧಾನ್ಯಗಳನ್ನು ಸಹ ಖರೀದಿ ಮಾಡಿ ಪಡಿತರದಲ್ಲಿ ಹಂಚಲು ಕ್ರಮವಹಿಸಲಾಗುತ್ತಿದೆ ಎಂದು ಕೃಷಿ ಸಚಿವರು ಹೇಳಿದರು.
ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ಮಾತನಾಡಿ, ಕೃವಿವಿ ಸಂಶೋಧನೆಗಳಿಂದ ಸಾಕಷ್ಟು ಜನರಿಗೆ ಉಪಯೋಗವಾಗಿದೆ. ಇನ್ನೂ ಹೆಚ್ಚಿನ ರೈತರಿಗೆ ಇದರ ಲಾಭ ಸೀಗಬೇಕು. ಇಳುವರಿ ಹೆಚ್ಚಳವಾಗಬೇಕು. ಈ ನಿಟ್ಟಿನಲ್ಲಿ ಕೃವಿವಿ ಕ್ರಮ ವಹಿಸಬೇಕು ಎಂದರು.
ರಾಜ್ಯದಲ್ಲಿ ಸುಮಾರು 55 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಿದರೂ ಸಹ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಸುಮಾರು 83 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ರಾಜ್ಯದಲ್ಲಿ ಕೈಗೊಳ್ಳಲಾಗುತ್ತಿದೆ. ಅಂದಾಜು 65 ಸಾವಿರ ಕೋಟಿ ರೂ.ಗಳ ಅನುದಾನವನ್ನು ಶಿಕ್ಷಣ ವಲಯಕ್ಕೆ ವೆಚ್ಚ ಮಾಡಲಾಗುತ್ತಿದೆ. ನೌಕರರ ವೇತನ ಮತ್ತು ಬಡವರಿಗೆ, ಅಂಗವಿಕಲರಿಗೆ, ವೃದ್ದಾಪ್ಯ ವೇತನ, ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಗೆ 1.20 ಲಕ್ಷ ಕೋಟಿ ಅನುದಾನ ವೆಚ್ಚ ಮಾಡಲಾಗುತ್ತಿದೆ. ಸುಮಾರು 60 ಸಾವಿರ ಕೋಟಿ ರೂ. ಗಳ ಅನುದಾನ ವಿವಿಧ ಯೋಜನೆಗಳಡಿ ಸಹಾಯಧನವನ್ನಾಗಿ ನೀಡಲಾಗುತ್ತಿದೆ ಎಂದು ಸಚಿವ ಸಂತೋಷ ಲಾಡ್ ಅವರು ಹೇಳಿದರು.
ವಿಧಾನ ಪರಿಷತ್ತ ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, ವಿಜ್ಞಾನಿಗಳ ಸಂಶೋಧನೆಗಳು ಮತ್ತು ಕೃವಿವಿ ಪ್ರಯೋಗಾಲಯದ ಕಾರ್ಯಗಳು ರೈತರಿಗೆ ತಲುಪಬೇಕು. ರೈತರ ಆತ್ಮಹತ್ಯೆಗಳು ಕಡಿಮೆ ಆಗಿವೆ. ರೈತರ ಜೀವನ ಸುಧಾರಣೆಗೆ ಎಲ್ಲರೂ ಕೈಜೋಡಿಸಬೇಕು. ಕೃಷಿಗೆ ಪೆÇ್ರೀತ್ಸಾಹ ನೀಡಬೇಕು. ಕೃವಿವಿಗಳು ಕ್ರಿಯಾಶೀಲವಾದಷ್ಟು ರೈತರ ಸಮಸ್ಯೆಗಳಿಗೆ ಪರಿಹಾರ ಸೀಗುತ್ತವೆ ಎಂದು ಅವರು ಹೇಳಿದರು.
ಧಾರವಾಡ ಡಿಸಿ, ಡಿಎಮ್ಗೆ ಅಭಿನಂದಿಸಿದ ಸಿಎಂ: 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮತ್ತು ನಿರಂತರ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳ ಸಮೀಕ್ಷೆಯಲ್ಲಿ ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅತೀವ ಕಾಳಜಿ ಮತ್ತು ನಿರಂತರ ಮೇಲಸ್ತುವಾರಿ ವಹಿಸಿ, ರಾಜ್ಯದಲ್ಲಿಯೇ ಮೊದಲ ಜಿಲ್ಲೆಯಾಗಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದಲ್ಲಿ ಧಾರವಾಡ ಜಿಲ್ಲೆಯಲ್ಲಿಯೇ ಹೆಚ್ಚು ಬೆಳೆಹಾನಿಯಾಗಿದ್ದು, 97 ಸಾವಿರ ಹೆಕ್ಟೆರ್ ಬೆಳೆ ಹಾನಿ ಪ್ರದೇಶವನ್ನು ಜಂಟಿ ಸಮೀಕ್ಷೆಯ ಮೂಲಕ ದಾಖಲಿಸಿದ್ದಾರೆ. ಈಗಾಗಲೇ ಬೆಳೆ ಹಾನಿಗೆ ಪರಿಹಾರ ಸಹ ಬಿಡುಗಡೆ ಮಾಡಿದ್ದು, ರೈತರ ಖಾತೆಗಳಿಗೆ ಪರಿಹಾರ ಜಮೆಯಾಗುತ್ತಿದೆ.
ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಹಾಗೂ ಅವರಿಗೆ ಸಮರ್ಥ ಮಾರ್ಗದರ್ಶನ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು ಅವರ ಕಾರ್ಯವನ್ನು ಶ್ಲ್ಯಾಘಿಸಿದರು.
ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ ಪಟ್ಟಣ, ಶಾಸಕರಾದ ಎನ್.ಎಚ್.ಕೋನರಡ್ಡಿ, ಅಬ್ಬಯ್ಯ ಪ್ರಸಾದ, ವಿಜಯಾನಂದ ಕಾಶಪ್ಪನವರ, ಯಾಶೀರ ಅಹ್ಮದ ಪಠಾಣ, ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಜಿ.ಎಸ್.ಪಾಟೀಲ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಕೃಷಿ ವಿಶ್ವವಿದ್ಯಾಲಯ ಕುಲಪತಿ ಪೆÇ್ರ.ಪಿ.ಎಲ್.ಪಾಟೀಲ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕೃವಿವಿಯ ವಿವಿಧ ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು.
ರೈತರಿಗೆ ಅನಕೂಲ ಮಾಡಿಕೊಡುವ ಹವಾಮಾನ ಆಧಾರಿತ ಮಾಹಿತಿ ನೀಡುವ ಕೃಷಿಧಾರೆ ನೂತನ ಆ್ಯಪ್ನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದರು. ಮತ್ತು ವಿವಿಧ ಬೆಳೆಗಳ ಸಾಧನೆ ಮಾಡಿದ ಪ್ರಗತಿಪರ ರೈತ ಮಹಿಳೆಯರನ್ನು ಹಾಗೂ ರೈತರನ್ನು ಸನ್ಮಾನಿಸಿ, ಗೌರವಿಸಿದರು.ಕಾರ್ಯಕ್ರಮದಲ್ಲಿ ಕೃವಿವಿ ಸಿಬ್ಬಂದಿಗಳು, ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರು ಹಾಗೂ ಇತರರು ಭಾಗವಹಿಸಿದ್ದರು.