ರಾಯಚೂರು ಕೃಷಿ ವಿಶ್ವವಿದ್ಯಾಲಯದ ‘ಘಟಿಕೋತ್ಸವ’ ಕುರಿತು ಇಲ್ಲಿದೆ ಮಾಹಿತಿ

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ಹದಿನಾಲ್ಕನೆಯ ಘಟಿಕೋತ್ಸವವನ್ನು ಇದೇ 2024ರ ಆಕ್ಟೋಬರ್ ತಿಂಗಳಲ್ಲಿ ನಡೆಸಲು ತಾತ್ಕಾಲಿಕವಾಗಿ ನಿರ್ಧರಿಸಲಾಗಿದೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

ವಿಶ್ವವಿದ್ಯಾಲಯ ವತಿಯಿಂದ 2022-23ರ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವ ಅಥವಾ 2024ರ ಜುಲೈ 31ರ ಒಳಗಾಗಿ ಪದವಿಗಳನ್ನು ಮುಗಿಸಿ ಪ್ರೊವಿಜನಲ್ ಡಿಗ್ರಿ ಸರ್ಟಿಫಿಕೇಟ್ ಪಡೆದಿರುವ ಅಭ್ಯರ್ಥಿಗಳು ಮಾತ್ರ ಈ ಘಟಿಕೋತ್ಸವಕ್ಕೆ ಅರ್ಜಿಸಲ್ಲಿಸಲು ಅರ್ಹರಾಗುತ್ತಾರೆ. ಘಟಿಕೋತ್ಸವದಲ್ಲಿ ಪದವಿಗಳನ್ನು ಉಪಸ್ಥಿತಿ ಹಾಗೂ ಅನುಪಸ್ಥಿತಿಯಲ್ಲಿ ಪಡೆಯಬಹುದು.

ಅರ್ಜಿ ನಮೂನೆಯನ್ನು ಕೃಷಿ ವಿಶ್ವವಿದ್ಯಾಲಯದ ವೆಬ್‌ಸೈಟ್: www.uasraichur.karnataka.gov.in ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸಮಂಜಸ ದಾಖಲಾತಿ ಹಾಗೂ ಶುಲ್ಕಗಳೊಂದಿಗೆ ಕೃಷಿ ವಿಜ್ಞಾಗಳ ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿಗೆ ಸೆ.09ರ ಸಂಜೆ 5ಗಂಟೆಯ ಒಳಗೆ ತಲುಪುವಂತೆ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read