ನ.7 ರಿಂದ 10 ರವರೆಗೆ ಕೃಷಿ-ತೋಟಗಾರಿಕೆ ಮೇಳ : ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬAಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ನ.7 ರಿಂದ 10 ರವರೆಗೆ ಕೃಷಿ ಮಹಾವಿದ್ಯಾಲಯ ನವಲೆ ಆವರಣದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ನ.8 ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೆರವೇರಿಸುವರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಪುಸ್ತಕ/ತಾಂತ್ರಿಕ ಕೈಪಿಡಿಗಳನ್ನು ಬಿಡುಗಡೆ ಮಾಡುವರು. ಕೃಷಿ ಸಚಿವ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್.ಚೆಲುವರಾಯಸ್ವಾಮಿ ವಸ್ತು ಪ್ರದರ್ಶನವನ್ನು ಹಾಗೂ ಗಣಿ, ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ತಂತ್ರಜ್ಞಾನ ಉದ್ಯಾನವನ್ನು ಉದ್ಘಾಟಿಸುವರು.

ಗ್ರಾಮಾಂತರ ಶಾಸಕರಾದ ಶಾರದಾ ಪರ್ಯಾನಾಯ್ಕ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸ್ರಾಜು, ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಸಂಸದ ಬಿ.ವೈ.ರಾಘವೇಂದ್ರ ಇವರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ವಿವಿಧ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪೊಲೀಸ್ ಅಧೀಕ್ಷಕರು, ಮಹಾನಗರ ಪಾಲಿಕೆ ಆಯುಕ್ತರು, ವಿಶ್ವವಿದ್ಯಾಲಯದ ಅಧಿಕಾರಿ ವರ್ಗದವರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕ ವರ್ಗದವರು ಪಾಲ್ಗೊಳ್ಳುವರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read