ಬೆಂಗಳೂರು: ಕೃಷಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಹೊರಡಿಸಲಾಗಿದ್ದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿಯ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕೃಷಿ ಆಯುಕ್ತರ ಕಚೇರಿ ನಿರ್ದೇಶನ ನೀಡಿದೆ
ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಹೊರಡಿಸಿರುವ ಅಧಿಸೂಚನೆಯನ್ನು ಹಿಂಪಡೆಯುವ ಬಗ್ಗೆ ಪತ್ರ ಬರೆಯಲಾಗಿದೆ.
ಕೃಷಿ ಇಲಾಖೆಯ ಕೃಷಿ ಅಧಿಕಾರಿ 128 ಮತ್ತು ಸಹಾಯಕ ಕೃಷಿ ಅಧಿಕಾರಿ 817, ಒಟ್ಟು 945 ಹುದ್ದೆಗಳನ್ನು ಭರ್ತಿಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊರಡಿಸಲಾಗಿರುತ್ತದೆ. ಸರ್ಕಾರದ ನಿರ್ದೇಶನದಂತೆ, ಪ್ರಸ್ತುತ ತಾವು ಹೊರಡಿಸಿರುವ ಉಲ್ಲೇಖಿತ ಅಧಿಸೂಚನೆಗಳನ್ನು ಕೂಡಲೇ ಹಿಂಪಡೆಯಲು ಕೋರಿದೆ.
ಈ ಹಿನ್ನೆಯಲ್ಲಿ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಇದೇ 8 ಮತ್ತು 9ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

