ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕ ಸ್ಥಾಪನೆ

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಂಸ್ಕರಣೆ ಘಟಕಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಕೃಷಿ ವಿವಿ, ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಭಾರತೀಯ ವಿಸ್ತರಣಾ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಹಣ್ಣು ತರಕಾರಿಗಳ ಪೋಲು ತಡೆಯಲು ಯೋಜನೆ ರೂಪಿಸಲಾಗಿದ್ದು, ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು. ದೇಶದಲ್ಲಿ ಶೇಕಡ 8ರಷ್ಟು ಆಹಾರ ಧಾನ್ಯ ಪೋಲಾಗುತ್ತಿದ್ದು, ಶೇಕಡ 30ರಷ್ಟು ಹಣ್ಣು, ತರಕಾರಿ ಸಂಸ್ಕರಿಸದೆ ಹಾಳಾಗುತ್ತಿವೆ. ವಿದೇಶಗಳಲ್ಲಿ ಶೇಕಡ 60ರಷ್ಟು ಆಹಾರ ಪದಾರ್ಥಗಳನ್ನು ಸಂಸ್ಕರಿಸುತ್ತಾರೆ ಎಂದರು.

ರಾಜ್ಯ ಸರ್ಕಾರ 5 ಜಿಲ್ಲೆಯಲ್ಲಿ 5 ಕೋಟಿ ವೆಚ್ಚದಲ್ಲಿ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುತ್ತಿದೆ. ಹೆಚ್ಚಿನ ಘಟಕಗಳಿಗೆ ಬೇಡಿಕೆ ಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಂಸ್ಕರಣಾ ಘಟಕ ಸ್ಥಾಪಿಸುವ ಯೋಜನೆ ಇದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read