HomeAgricultureಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ: ವಿವಿಧ ಬೆಳೆಗಳಿಗೆ ವಿಮೆ...

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಕೃಷಿ ಇಲಾಖೆಯಿಂದ ಮುಖ್ಯ ಮಾಹಿತಿ: ವಿವಿಧ ಬೆಳೆಗಳಿಗೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆಗಳ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಜೋಳ(ನೀ), ಕಡಲೆ (ನೀ/ಮ)ಹಾಗೂ ಬೇಸಿಗೆ ಹಂಗಾಮಿನ ಗ್ರಾಮಪಂಚಾಯಿತಿ ಮಟ್ಟದ ಬೆಳೆಗಳಾದ ನೆಲಗಡಲೆ(ಶೇಂಗಾ)(ನೀ), ಭತ್ತ (ನೀ), ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ಬೆಳೆಗಳಾದ ಮುಸುಕಿನ ಜೋಳ(ನೀ), ಸೂರ್ಯಕಾಂತಿ(ನೀ/ಮ)  ಕುಸುಮೆ(ಮ), ಈರುಳ್ಳಿ(ನೀ), ಮತ್ತು ಬೇಸಿಗೆ ಹಂಗಾಮಿನ ಸೂರ್ಯಕಾಂತಿ(ನೀ), ಈರುಳ್ಳಿ (ನೀ) ಜಿಲ್ಲೆಯ ಬೆಳೆಗಳಾಗಿವೆ.

ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿದೆ. ಹಿಂಗಾರು ಹಂಗಾಮಿನ ಬೆಳೆಗಳಾದ-ಜೋಳ(ನೀ), ಮುಸುಕಿನ ಜೋಳ (ನೀ)- ಡಿ.16  ಮತ್ತು ಕಡಲೆ(ನೀ/ಮ)-ಡಿ.31. ಸೂರ್ಯಕಾಂತಿ (ನೀ/ಮ) ಹಾಗೂ ಕುಸುಮೆ (ಮ)-ಡಿ.16. ಬೇಸಿಗೆ ಬೆಳೆಗಳಾದ ಭತ್ತ (ನೀ), ನೆಲಗಡಲೆ (ಶೇಂಗಾ), ಸೂರ್ಯಕಾಂತಿ (ನೀ), ಈರುಳ್ಳಿ (ನೀ) 2025ರ ಫೆ.28ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‌ಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular