HomeKarnatakaBIG NEWS: ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

BIG NEWS: ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ವರುಣಾರ್ಭಟಕ್ಕೆ ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡ ಕುಸಿತವುಂತಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದೆ ಆಗುಂಬೆ ಘಾಟ್ ನಲ್ಲಿ ನಾಲ್ಕನೇ ತಿರುವಿನಲ್ಲಿ ತಡೆಗೋಡೆ ಕುಸಿತಗೊಂಡಿರುವ ವಗ್ಗೆ ವರದಿಯಾಗಿತ್ತು. ಇದೀಗ 5ನೇ ತಿರುವಿನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೃಹತ್ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ರೀತಿ ಮಳೆ ಮುಂದುವರಿದರೆ ಆಗುಂಬೆ ಘಾಟ್ ನಲ್ಲಿ ಇನ್ನಷ್ಟು ಕಡೆಗಳಲ್ಲಿ ಗುಡ್ಡ ಕುಸಿತವಾಗುವ ಆತಂಕ ಎದುರಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular