HomeLatest NewsBREAKING NEWS: ಆಗುಂಬೆ ಘಾಟ್ ನಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ!

BREAKING NEWS: ಆಗುಂಬೆ ಘಾಟ್ ನಲ್ಲಿ ಭಾರಿ ವಾಹನ ಸಂಚಾರಕ್ಕೆ ನಿಷೇಧ!

ಶಿವಮೊಗ್ಗ: ಭಾರಿ ಮಳೆಯಿಂದ ಭೂ ಕುಸಿತವಾಗುವ ಭೀತಿ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ. ಆಗುಂಬೆ ಘಾಟ್ ನಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಭಾರಿ ವಾಹನ ಸಂಚಾರಕ್ಕೆ ನಿಷೇಧ ಹಿನ್ನೆಲೆಯಲ್ಲಿ ವಾಹನಗಳು ಬದಲಿ ಮಾರ್ಗದಲ್ಲಿ ತೆರಳುವಂತೆ ಸೂಚಿಸಲಾಗಿದೆ. ಉಡುಪಿ-ಕುಂದಾಪುರ-ಸಿದ್ಧಾಪುರ- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular