BREAKING NEWS: ಏರ್ ಇಂಡಿಯಾ ವಿಮಾನ ಪತನ ಪ್ರಕರಣ: ಬಿ.ಜೆ. ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ಅಪ್ಪಳಿಸಿದ ಫ್ಲೈಟ್: ಹಲವು ವಿದ್ಯಾರ್ಥಿಗಳು ಸಾವು

ಅಹಮದಾಬಾದ್: ಗುಜರಾತ್ ನ ಅಹಮಾದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈನಡುವೆ ವಿಮಾನ ಮೊದಲಿಗೆ ಮೆಡಿಕಲ್ ಕಾಲೇಜುವೊಂದರ ಹಾಸ್ಟೆಲ್ ಗೆ ಅಪ್ಪಳಿಸಿದ್ದು, ಎರಡು ಕಟ್ಟದಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಅಹಮದಾಬಾದ್ ನ ಏರ್ ಪೋರ್ಟ್ ನಿಂದ 242 ಪ್ರಯಾಣಿಕರನ್ನು ಹೊತ್ತು ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆದ ೫ ನಿಮಿಷದಲ್ಲಿ ಪತನಗೊಂಡಿದೆ. ವಿಮಾನ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಬಿ.ಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದೆ. ವಿಮಾನ ಅಪ್ಪಳಿಸಿದ ಹೊಡೆತಕ್ಕೆ ಹಾಸ್ಟೆಲ್ ನ ಕ್ಯಾಂಟಿನ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ವಿದ್ಯಾರ್ಥಿಗಳು ಊಟಕ್ಕೆ ಕುಳಿತಿದ್ದ ವೇಳೆಯೇ ವಿಮಾನ ಅಪ್ಪಳಿಸಿದೆ. ಘಟನೆಯಲ್ಲಿ ಹಾಸ್ಟೆಲ್ ಸಿಬ್ಬಂದಿ ಸೇರಿ 20 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಹಾಸ್ಟೆಲ್ ನ ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡ ಕೂಡ ಬೆಂಕಿಗಾಹುತಿಯಾಗಿದೆ. ಇದರಿಂದಾಗಿ ವಿಮಾನ ಪತನದಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

https://x.com/hirparadivyesh/status/1933081082381144435?ref_src=twsrc%5Etfw%7Ctwcamp%5Etweetembed%7Ctwterm%5E1933081082381144435%7Ctwgr%5E90f3e647795214aef4d08110ac62c5e38b9f2154%7Ctwcon%5Es1_&ref_url=https%3A%2F%2Fwww.freepressjournal.in%2Findia%2Fbreaking-news-passenger-plane-crashes-near-gujarats-ahmedabad-airport

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read