HomeLatest NewsBIG NEWS: ಏರ್ ಇಂಡಿಯಾ ವಿಮಾನ ಅಪಘಾತ: ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿದ ಸಿಎಂ ಸಿದ್ದರಾಮಯ್ಯ

BIG NEWS: ಏರ್ ಇಂಡಿಯಾ ವಿಮಾನ ಅಪಘಾತ: ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಘಾತ ವ್ಯಕ್ತಪಡಿಸಿದ್ದು, ಪ್ರಯಾಣಿಕರೆಲ್ಲರೂ ಸುರಕ್ಷತವಾಗಿರಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular